ಚಾಮರಾಜನಗರ: ಕಂಟ್ರೋಲಿಂಗ್ ಅಬಕಾರಿ ಭದ್ರತಾ ಚೀಟಿಗಳು ಇಲ್ಲದೇ ಇರುವುದು ಕಂಡುಬಂದ ಕಾರಣದಿಂದ ೧೫,೨೩,೯೦೦ ರೂ. ಮೌಲ್ಯದ ೪೩೨೦ ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಮದ್ಯ ಪೂರೈಸಿದ ಡಿಸ್ಟಿಲರಿ ಸನ್ನದುದಾರರು ಹಾಗೂ ಚಾಲಕರ ವಿರುದ್ದ ಮೊಕದ್ದಮೆ ದಾಖಲಿಸಿದ್ದಾರೆ.

ಇಂದು ಬೆಳಿಗ್ಗೆ ೧೦.೩೦ ಗಂಟೆ ಸಮಯದಲ್ಲಿ ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಹಾಗೂ ಚಾಮರಾಜನಗರ ಜಿಲ್ಲಾ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಚಾಮರಾಜನಗರದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಲ್ಲಿ ಜಿಲ್ಲಾದಳದ ನಿರೀಕ್ಷಕರು ಹಾಗೂ ಸಿಬ್ಬಂದಿ ಚಾಮರಾಜನಗರದ ಕೆ.ಎಸ್.ಬಿ.ಸಿ.ಎಲ್ ಡಿಪೋ ಇಲ್ಲಿಗೆ ಹಾಸನದ ವುಡ್ ಪೆಕ್ಕರ್ ಡಿಸ್ಟಿಲರಿಯಿಂದ ಸರಬರಾಜಾದ ಮದ್ಯದಲ್ಲಿ ಕಂಟ್ರೋಲಿಂಗ್ ಅಬಕಾರಿ ಭದ್ರತಾ ಚೀಟಿಗಳು ಇಲ್ಲದೇ ಇರುವುದು ಕಂಡುಬಂದ ಮೇರೆಗೆ ೧೫,೨೩,೯೦೦ ರೂ. ಮೌಲ್ಯದ ೪೩೨೦ ಲೀಟರ್ ಮದ್ಯವನ್ನು ವಶಕ್ಕೆ ಪಡೆದು ಡಿಸ್ಟಿಲರಿ ಸನ್ನದುದಾರರು ಹಾಗೂ ಚಾಲಕರ ಮೇಲೆ ಮೊಕದ್ದಮೆ ದಾಖಲಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಆಯುಕ್ತರಾದ ಆರ್. ನಾಗಶಯನ, ಅಬಕಾರಿ ಉಪ ಅಧೀಕ್ಷಕರಾದ ಎಂ.ಡಿ. ಮೋಹನ್ ಕುಮಾರ್, ಅಬಕಾರಿ ನಿರೀಕ್ಷಕರಾದ ಮೀನಾ, ಕೆ.ಎಸ್.ಬಿ.ಸಿ.ಎಲ್ ಡಿಪೋ ವ್ಯವಸ್ಥಾಪಕರಾದ ಬಸವರಾಜು, ಅಬಕಾರಿ ನಿರೀಕ್ಷಕರಾದ ಗುರುನಾಥಶೆಟ್ಟಿ ಸಿಬ್ಬಂದಿ ಇದ್ದರು ಎಂದು ಪ್ರಕಟಣೆ ತಿಳಿಸಿದೆ.