ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ನಿಂದ ಎಚ್.ಡಿ.ಕೋಟೆ ವಿಧಾನ ಸಭಾ ಕ್ಷೇತ್ರದ ನೂತನ ತಾಲೂಕು ಸರಗೂರು ಪಟ್ಟಣ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯನ್ನು ಮಾ.12ರಂದು ಪಟ್ಟಣದ ನಾಮಧಾರಿಗೌಡ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಗ್ರಾಮಾಂರತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಶಾಸಕ ಅನಿಲ್ ಚಿಕ್ಕಮಾದು ನೇತೃತ್ವದಲ್ಲಿ ನಡೆಯುವ ಸಭೆಯನ್ನು ಮಾಜಿ ಸಂಸದ ಆರ್.ಧ್ರುವನಾರಾಯಣ ಉದ್ಘಾಟಿಸಲಿದ್ದಾರೆ. ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಡಾ.ಬಿ.ಜೆ.ವಿಜಯಕುಮಾರ್ ಅಧ್ಯಕ್ಷತೆ ವಹಿಲಿದ್ದಾರೆ. ಕೆಪಿಸಿಸಿ ವೀಕ್ಷಕ, ಸರಗೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ವರುಣ್ ಮಹೇಶ್ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಪಟ್ಟಣ ಪಂಚಾಯಿತಿ ಸದಸ್ಯರ ಆಯ್ಕೆಗಾಗಿ ಮಾ.29ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ 12 ವಾಡರ್್ಗಳಲ್ಲಿ ಗೆಲುವು ಸಾಧಿಸಬೇಕು. ಇದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಅಭ್ಯಥರ್ಿಗಳ ಪರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ನ ಸಾಧನೆಗಳ ಕುರಿತು ಜನರಿಗೆ ಅರಿವು ಮೂಡಿಸುವ ಮೂಲಕ ಮತಯಾಚನೆ ಮಾಡಬೇಕು. ಆ ಮೂಲಕ ಅವರ ಗೆಲುವಿಗೆ ಶ್ರಮಿಸಬೇಕು ಎಂದರು .