ಬೆಂಗಳೂರು ಮೇ 17: ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಪೂರಕ ಮಾಹಿತಿ ಸಂಗ್ರಹಿಸಲಿದ್ದಾರೆ . ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಇಂದು ಸಭೆ ನಡೆಸಲಿದ್ದಾರೆ . ರಾಜ್ಯದಲ್ಲಿ ಕೊರೋನಾ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದೆ . ರಾಜ್ಯದಲ್ಲಿ ಲಾಕ್ ಡೌನ್ ಮೇ 24 ರಂದು ಕೊನೆಗೊಳ್ಳಲಿದೆ . ಇದು ವಿಸ್ತರಣೆಯಾಗುವ ಸಾಧ್ಯತೆ ಬಹುತೇಕ ಹೆಚ್ಚಾಗಿದೆ . ರಾಜ್ಯದಲ್ಲಿ ಕನಿಷ್ಟ ಒಂದು ವಾರ ಲಾಕ್ ಡೌನ್ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

By admin