ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟಕ್ಕೆ ಸಂಪರ್ಕಿಸುವ ಕ್ಯಾತೆದೇವರಗುಡಿ ರಸ್ತೆಗುಂಡಿಬಿದ್ದಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ರಸ್ತೆ ದುರಸ್ತಿಗೆ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟ ಹುಲಿಸಂರಕ್ಷಿತ ಅರಣ್ಯ ಪ್ರದೇಶವಾಗಿದ್ದು,ಈಚಿನ ದಿನಗಳಲ್ಲಿ ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ವಿಷಾಧದ ಸಂಗತಿಎಂದರೆ ಜವಾಹರ್ ನವೋದಯ ವಿದ್ಯಾಲಯದಿಂದ ಕೆ.ಗುಡಿವರೆಗಿನ
ಆಯ್ದ ಕೆಲವು ಕಿರಿದಾದ ತಿರುವುಗಳಲ್ಲಿ ರಸ್ತೆ ಗುಂಡಿಬಿದ್ದಿದ್ದು, ಪ್ರವಾಸಿಗರ ಸಂಚಾರಕ್ಕೆ ತೊಂದರೆಯಾಗಿದ್ದು, ಕೂಡಲೇ ಗುಂಡಿಬಿದ್ದಿರುವ ರಸ್ತೆಯ ದುರಸ್ತಿಗೆ ಸಂಬಂಧಪಟ್ಟ ಇಲಾಖೆಯವರು ಮುಂದಾಗಬೇಕು, ಅಪಘಾತವಲಯದ ಸೂಚನಾಫಲಕ ಅಳವಡಿಸಬೇಕು, ತಿರುವುಗಳಲ್ಲಿ ತಡೆಗೋಡೆ ನಿರ್ಮಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಕೋಡಿಮೋಳೆ ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು, ಕಾರ್ಯದರ್ಶಿ ಮಲ್ಲೇಶ್, ಸದಸ್ಯ ಮಣಿಕಂಠ ಮನವಿಯಲ್ಲಿ ಒತ್ತಾಯಿಸಿದ್ದಾರೆ.
