ಚಾಮರಾಜನಗರ: ತಾಲೂಕಿನ ಸರಗೂರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಕೋಡಿಮೋಳೆ ಭಗತ್ ಯುವಸೇನೆ ವತಿಯಿಂದ ಕ್ರೀಡಾಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.

ಭಗತ್‌ಸಿಂಗ್ ಯುವಸೇನೆ ಅಧ್ಯಕ್ಷ ಕಾಂತರಾಜು ಮಾತನಾಡಿ, ನಮ್ಮ ಸಂಘಟನೆ ವತಿಯಿಂದ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಭಾರತದ ಮಾಜಿಪ್ರಧಾನಿ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳದಿನಾಚರಣೆಯಾಗಿ ಆಚರಣೆ ಮಾಡಲಾಗುತ್ತಿದ್ದು, ಆ ನಿಟ್ಟಿನಲ್ಲಿ ಶಾಲಾಮಕ್ಕಳಿಗೆ ಕ್ರೀಡಾಸಾಮಾಗ್ರಿ ವಿತರಣೆ ಮಾಡಲಾಗಿದೆ. ಶಾಲಾಮಕ್ಕಳು ಸರಕಾರ ನೀಡುವ ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡು, ಶಿಕ್ಷಣದ ಜತೆ ಕ್ರೀಡೆಗಳಲ್ಲೂ ಸಾಧನೆ ಮಾಡಬೇಕು ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಗುಲ್ನಾಜ್, ಸಂಘದ ಸದಸ್ಯ ಶಿವರಾಜ್ ಸೇರಿದಂತೆ ಇತರರು ಹಾಜರಿದ್ದರು.