ಚಾಮರಾಜನಗರ: ಚಾಮರಾಜನಗರದಲ್ಲಿ ಜೂ.14ರವರೆಗೆ ನಿಷೇಧಾಜ್ಞೆ ಮುಂದುವರಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೊರೊನಾ ವೈರಸ್‌ನ ಎರಡನೇ ಅಲೆ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಸಿ.ಆರ್.ಪಿ.ಸಿ 1973 ಕಲಂ 144(1) ರಡಿಯಲ್ಲಿ ಜಿಲ್ಲೆಯಾದ್ಯಂತ ಜೂ. 7ರ ಬೆಳಿಗ್ಗೆ 6ಗಂಟೆಯಿಂದ ಜೂ.14ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ ವಾರದ ಮೂರು ದಿನಗಳು ಅಂದರೆ ಸೋಮವಾರ, ಮಂಗಳವಾರ, ಬುಧವಾರಗಳಂದು ಮಾರ್ಗಸೂಚಿಯಲ್ಲಿ ವಿವರಿಸಿರುವ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿ ಉಳಿದ ವಾರದ ದಿನಗಳಾದ ಗುರುವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ವೈದ್ಯಕೀಯ ಸೇವೆಗಳನ್ನು ಹಾಗೂ ದಿನಾಂಕ 12-05-2021, 22-05-2021 ಮತ್ತು 24-05-2021ರ ಆದೇಶ ಪ್ರಕಾರ ವಿನಾಯಿತಿ ನೀಡಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿ ಆದೇಶಿಸಿದ್ದಾರೆ.
ಕೋವಿಡ್-19 ನಿರ್ವಹಣೆಯ ಕ್ರಮಗಳನ್ನು ಮತ್ತು ರಾಷ್ಟ್ರೀಯ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51ರಿಂದ 60ರ ಉಪಬಂಧಗಳು, ಭಾರತೀಯ ದಂಡಸಂಹಿತೆ ಸೆಕ್ಷನ್ ೧೮೮ರಡಿಯಲ್ಲಿ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.