ಮೈಸೂರು: ಮೈಸೂರು ಮಹಾನಗರ ಪಾಲಿಕೆ ನೂತನ ಮೇಯರ್ ಚುನಾವಣೆ  ಜೂನ್ 11 ರಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಮಹಾನಗರ ಪಾಲಿಕೆಯ ಕೌನ್ಸಿಲ್ ಕಾರ್ಯದರ್ಶಿ ತಿಳಿಸಿದ್ದಾರೆ.

ಕರ್ನಾಟಕ ಮುನ್ಸಿಪಲ್ ಕಾರ್ಪೋ ರೇಷನ್  (ಚುನಾವಣೆ) (ತಿದ್ದುಪಡಿ) ನಿಯಮಗಳು 1995ರ ನಿಯಮ 72ರ ರೀತ್ಯಾ, ನಮೂನೆ 27ರಲ್ಲಿ ನಾಮ ನಿರ್ದೇಶನ ಪತ್ರವನ್ನು ಮೈಸೂರು ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರು ಜೂನ್ 3 ರಿಂದ 10 ರವರೆಗೆ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಹಾಗೂ ಜೂನ್ 3 ರಂದು ಚುನಾವಣೆ ಸಭೆ ಪ್ರಾರಂಭವಾಗುವ ಎರಡು ಗಂಟೆಗಳ ಮುಂಚಿತವಾಗಿ ಅಂದರೆ, ಜೂನ್ 11ರ ಬೆಳಿಗ್ಗೆ 8 ಗಂಟೆಯಿಂದ 10ಗಂಟೆಯವರೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಧಿಕೃತಗೊಳಿಸಲಾದ ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜ ಒಡೆಯರ್ ಸಭಾಂಗಣದಲ್ಲಿ ಸಲ್ಲಿಸಬೇಕು.

ಜೂ.11 ರಂದು ಅಪರಾಹ್ನ 12 ಗಂಟೆಗೆ ಮೈಸೂರು ಮಹಾನಗರ ಪಾಲಿಕೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣದಲ್ಲಿ ಸಭೆಯು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಾವೇಶಗೊಂಡು ಚುನಾವಣಾ ಪ್ರಕ್ರಿಯೆಯನ್ನು ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

By admin