ಮೈಸೂರು: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಇಪ್ಪತ್ತನಾಲ್ಕು ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಮೇಲೆ ಆರೋಪ ಹೊರಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಈ ನಡುವೆ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸದೆ ಜಿಲ್ಲಾಧಿಕಾರಿಯಾಗಿ ಮೈಸೂರಿನಲ್ಲಿಯೇ ಉಳಿಸಿ ಎಂದು ಮೈಸೂರು ಯುವ ಬಳಗದ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಗಾಂಧಿ ಪ್ರತಿಮೆಯ ಮುಂಭಾಗ ಮನವಿ ಫಲಕ ಹಿಡಿದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುವ ಮೂಲಕ ಗಮನಸೆಳೆಯಲಾಗಿದೆ.
ಈ ವೇಳೆ ಮಾತನಾಡಿದ ಮೈಸೂರು ಯುವ ಬಳಗದ ಕಾರ್ಯದರ್ಶಿ ನವೀನ್ ಅವರು ರೋಹಿಣಿ ಸಿಂಧೂರಿ ಅವರಂತಹ ದಕ್ಷ ಜಿಲ್ಲಾಧಿಕಾರಿ ಸೇವೆ ಸಲ್ಲಿಸಲು ಮೈಸೂರಿನಲ್ಲಿಯೇ ಉಳಿಸಿಕೊಳ್ಳಲು ಜನಪ್ರತಿನಿಧಿಗಳು ಮುಂದಾಗಬೇಕು, ಕೋವಿಡ್ ನಿಂದ ಜನರನ್ನು ರಕ್ಷಿಸಲು ಮುಂಜಾಗ್ರತಾ ಕ್ರಮಕೈಗೊಂಡಿದ್ದರು. ಕೋವಿಡ್ ೨ನೇ ಅಲೆ ಲಾಕ್ ಡೌನ್ ಕ್ರಮ ಜಾರಿಗೆ ಬರುವುದಕ್ಕೂ ಮುನ್ನ ಮೈಸೂರು ಜಿಲ್ಲೆಗೆ ಹೊರಗಿನರಿಗೆ ನಿರ್ಬಂಧ ಹೇರಿದ್ದರು, ಇಂತಹ ದಕ್ಷ ಮಹಿಳಾ ಅಧಿಕಾರಿ ಮೈಸೂರುವುದೇ ಹೆಮ್ಮೆಯಾಗಿದೆ. ಇವರ ವಿರುದ್ಧ ಕೆಲವರು ಮಾನವೀಯತೆ ಮರೆತು ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು. ಕಳೆದ ಹತ್ತು ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಇವರ ಪರವಾಗಿ ನಮ್ಮ ಮೈಸೂರಿಗರು ಧ್ವನಿಯೆತ್ತಬೇಕಾಗಿದೆ ಎಂದು ಮನವಿ ಮಾಡಿದರು.

By admin