ಚಾಮರಾಜನಗರ: ಚಾಮರಾಜನಗರ ಜಿಲ್ಲೆಗೆ ಇದೇ ಡಿಸೆಂಬರ್ ೧೨ರಂದು ಮುಖ್ಯಂತ್ರಿಯವರು ಆಗಮಿಸಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪವಿಲ್ಲದಂತೆ ಅಧಿಕಾರಿಗಳು ಅಚ್ಚುಕಟ್ಟಾಗಿ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ವಸತಿ, ಮೂಲಸೌಲಭ್ಯ ಅಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಪೂರ್ವ ಸಿದ್ದತೆಗಳ ಪರಿಶೀಲನೆಗಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಂತ್ರಿಯವರು ಡಿಸೆಂಬರ್ ೧೨ ರಂದು ಮೊದಲಿಗೆ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಬಳಿಕ ಹನೂರಿನಲ್ಲಿಯೂ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ತದನಂತರ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಭೆ ನಡೆಸುವರು. ಈ ಎಲ್ಲಾ ಕಾರ್ಯಕ್ರಮಗಳಿಗೆ ಅಚ್ಚುಕಟ್ಟಾಗಿ ಪೂರ್ವ ಸಿದ್ದತೆ ಕೈಗೊಳ್ಳಬೇಕೆಂದು ಉಸ್ತುವಾರಿ ಸಚಿವರು ತಿಳಿಸಿದರು. \
ಜಿಲ್ಲೆ ಸವಾಂಗೀಣ ಅಭಿವೃಧ್ದಿಯಾಗಬೇಕಿದೆ. ಇನ್ನ? ಕಾರ್ಖಾನೆಗಳು, ಉದ್ಯಮಗಳು ಬೆಳೆಯಬೇಕಿದೆ. ಪ್ರಗತಿಗೆ ಉತ್ತೇಜನ ನೀಡಬೇಕಾಗುತ್ತೆದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮುಖೇನ ಶಕ್ತಿ ತುಂಬಬೇಕಿದೆ. ಅಭಿವೃದ್ದಿಗೆ ಪೂರಕವಾಗಿ ಹಲವು ಪ್ರಕ್ರಿಯೆಗಳು ನಡೆಯಬೇಕಿದೆ. ಮುಖ್ಯಂತ್ರಿಗಳ ಭೇಟಿ ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಅಧಿಕಾರಿಗಳು ಸಕಲ ಸಿದ್ದತೆಯನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಇಡೀ ಜಿಲ್ಲೆಯ ಕೆರೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ವಿಸೃತ ಯೋಜನಾ ವರದಿ ತಯಾರಾಗಿದೆ. ಜಿಲ್ಲೆಯ ಜನರಿಗೆ ಅನುಕೂಲವಾಗುವ ಕಾರ್ಯಕ್ರಮ ಸೌಲಭ್ಯಗಳನ್ನು ತಲುಪಿಸಬೇಕು.ಅಧಿಕಾರಿಗಳು ಕಾರ್ಯಕ್ರಮ ಆಯೋಜನೆಗೆ ಪೂರಕವಾಗಿರುವ ಎಲ್ಲಾ ಕ್ರಮಗಳಿಗೆ ಮುಂದಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ಇದೇ ತಿಂಗಳ ೭ ಹಾಗೂ ೮ರಂದು ಜಿಲ್ಲೆಗೆ ಮತ್ತೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜಿಲ್ಲೆಯ ಪ್ರಗತಿಗೆ ತಾವು ಬದ್ದರಾಗಿದ್ದು ಕಾರ್ಯಕ್ರಮಗಳ ಅನು?ನ ಮಾಡಲಾಗುವುದು ಎಂದರು.
ಇದೇ ವೇಳೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕುಡಿಯುವ ನೀರಿನ ಮೂರನೇ ಹಂತ ಯೋಜನೆ ವಿಳಂಬವಾಗಿದೆ. ಇದು ಜಾರಿಗೆ ಬರಬೇಕು. ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳ ಗುರುತಿಸಲಾಗಿದ್ದು ಈ ಕಾರ್ಯ ಚಾಲನೆಗೆ ಬರಬೇಕಿದೆ ಎಂದು ಸಭೆಯಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು ಕೂಡಲೇ ಕುಡಿಯುವ ನೀರು ಯೋಜನೆಯ ಕಡತ ಮಂಡಿಸಬೇಕು. ಇದರ ಮುಂದಿನ ಪ್ರಕ್ರಿಯೆಗೆ ನಾನೇ ಕ್ರಮವಹಿಸುತ್ತೇನೆ ಎಂದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಬಂಧ ಸಹ ತ್ವರಿತವಾಗಿ ಕ್ರಮ ತೆಗೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಯವರಿಗೆ ಸಚಿವರು ಸೂಚನೆ ನೀಡಿದರು.
ಶಾಸಕರಾದ ಆರ್. ನರೇಂದ್ರ ಅವರು ಮಾತನಾಡಿ ಮುಖ್ಯಮಂತ್ರಿಯವರು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಹೆಚ್ಚು ಮೊತ್ತದ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸುತ್ತಿದ್ದಾರೆ. ಇದೇ ವೇಳೆ ರಾಮನಗುಡ್ಡ ಸೇರಿದಂತೆ ಎರಡು ಜಲಾಶಯಗಳಿಗೆ ಪೈಪ್ ಲೈನ್ ಅಳವಡಿಸಿದರೆ ೧೭ ಸಾವಿರ ಹೆಕ್ಟೇರ್ ರೈತರ ಭೂಮಿಗೆ ಅನುಕೂಲವಾಗಲಿದೆ. ಮಲೈ ಮಹದೇಶ್ವರಬೆಟ್ಟ ವ್ಯಾಪ್ತಿಯ ೬ ಹಳ್ಳಿಗಳಿಗೆ ವಿದ್ಯುತ್ ಕಲ್ಪಿಸಬೇಕು. ಈ ಎಲ್ಲಾ ಕೆಲಸಗಳು ಮುಖ್ಯಮಂತ್ರಿಗಳು ಬರುವ ಹೊತ್ತಿಗೆ ಆಗಬೇಕು ಎಂದು ಗಮನಕ್ಕೆ ತಂದರು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ ಕೂಡಲೇ ಪೈಪ್ ಲೈನ್ ಕೆಲಸಗಳಿಗೆ ಮುಂದಾಗಬೇಕು. ಅರಣ್ಯ ಇಲಾಖೆಯವರು ವಿದ್ಯುತ್ ಸಂಪರ್ಕಕಕ್ಕೆ ಬೇಗನೆ ಅನುಮೋದನೆ ನೀಡಬೇಕೆಂದು ಸೂಚನೆ ನೀಡಿದರು.
ಶಾಸಕರಾದ ಎನ್. ಮಹೇಶ್ ಅವರು ಮಾತನಾಡಿ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೆಕೆರೆ ಏತ ನೀರಾವರಿ ಯೋಜನೆ ಕಳೆದ ಎರಡು ವ?ದಿಂದ ಬಾಕಿ ಉಳಿದಿದೆ. ಇದನ್ನು ಯೋಜನೆಗೆ ಸೇರ್ಪಡೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪಗಳು ವ್ಯವಸ್ಥೆಯಾಗಬೇಕು. ನಗರೋತ್ಥಾನ ೪ನೇ ಹಂತದ ಅನುದಾನದಲ್ಲಿ ರಸ್ತೆ, ವಿದ್ಯುತ್ ದೀಪ ಇನ್ನಿತರ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಇದಕ್ಕೆ ಅಗತ್ಯ ಸೂಚನೆ ನೀಡಬೇಕು ಎಂದರು. ಈ ಸಂಬಂಧ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ನಗರೋತ್ಥಾನದಡಿ ಕಾಮಗಾರಿ ನಿರ್ವಹಣೆಗೆ ಮುಂದಾಗಬೇಕು. ನೀರಾವರಿ ಇಲಾಖೆ ಅಧಿಕಾರಿಗಳು ಕೋಟೆಕೆರೆ ಅಭಿವೃದ್ದಿಗೆ ಯೋಜನೆಯಡಿ ಸೇರ್ಪಡೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್ ಅವರು ಮಾತನಾಡಿ ತಮ್ಮ ಭಾಗದ ಕೆರೆಗಳಿಗೆ ನೀರು ಹರಿಸುವುದು, ನಿರಂತರ ಜ್ಯೋತಿಗೆ ೩೦ ಗ್ರಾಮ ಬಿಟ್ಟುಹೋಗಿರುವುದನ್ನು ಸೇರ್ಪಡೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ವಿದ್ಯುತ್ ದೀಪಗಳು ಅಳವಡಿಕೆಯಾಗಬೇಕು ಎಂದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ಸಂಬಂಧ ಎಲ್ಲಾ ಕ್ರಮಗಳಿಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆ ಅಧ್ಯಕ್ಷರಾದ ಸಿ.ಎಂ. ಆಶಾ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಟಿ.ಪಿ. ಶಿವಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿ?ಧಿಕಾರಿ ಕೆ.ಎಸ್. ಸುಂದರ್ ರಾಜ್, ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರು ಹಾಗೂ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ದೀಪ ಕಂಟ್ರಾಕ್ಟರ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿ ಸಂತೋ? ಕುಮಾರ್, ಕೆಶಿಪ್ ಯೋಜನೆಯ ವ್ಯವಸ್ಥಾಪಕ ನಿರ್ದೇಶಕರಾದ ಶಿವಕುಮಾರ್ ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.