ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ ೨೨ರಂದು ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ನಂಜನಗೂಡು, ಮೈಸೂರು ಹಾಗೂ ಬೆಂಗಳೂರಿನ ಖಾಸಗಿ ಕಂಪನಿಗಳಲ್ಲಿ ಮಾರುಕಟ್ಟೆ ಸೇವೆಗಳು, ಹಣಕಾಸು, ಇನ್ಸೂರೆನ್ಸ್, ಕೈಗಾರಿಕಾ, ಬ್ಯಾಂಕಿಂಗ್ ಮತ್ತು ಆಸ್ಪತ್ರೆ ಸೇವೆಗಳು ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳ ಸುಮಾರು ೨೫ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಹಾಗೂ ಡಿಪ್ಲೊಮಾ, ನಸಿಂಗ್, ಜಿ.ಡಿ.ಎ ಮತ್ತು ಎಲ್ಲಾ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ೧೮ ರಿಂದ ೩೫ ವ? ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ನಿರುದ್ಯೋಗಿಗಳು ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ತಮ್ಮ ವೈಯಕ್ತಿಕ ವಿವರಗಳನ್ನು ಕನಿ? ೧೦ ಪ್ರತಿಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮೊದಲು ನೊಂದಣಿ ಕೌಂಟರ್‌ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಬೇಕು. ಲಿಂಕ್ ಮೂಲಕವು ಸಹ ನೊಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಥವಾ ದೂ.ಸಂ ೦೮೨೨೬-೨೯೫೦೮೦, ಮೊ.ಸಂ ೯೯೦೦೬೭೭೯೨೨ ಹಾಗೂ ೭೮೯೨೧೯೦೧೩೭ ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.