ಚಾಮರಾಜನಗರ: ನಗರದಲ್ಲಿರುವ ಶ್ರೀಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ವತಿಯಿಂದ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.

ಚಾಮರಾಜನಗರದ ಶ್ರೀ ಭುಜಂಗೇಶ್ವರ ಬಡಾವಣೆಯಲ್ಲಿರುವ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ಬಡವರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಭಾಗವಹಿಸಿ ಕಿಟ್ ವಿತರಿಸಿ ಮಾತನಾಡಿ, ಕೋವಿಡ್ ಸಂಕಷ್ಟ ಕಾಲದಲ್ಲಿ ಹಲವಾರು ಸಂಘ ಸಂಸ್ಥೆಗಳು ಬಡವರ ನೆರವಿಗೆ ಬರುತ್ತಿವೆ, ಅದರಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯೂ ಒಂದಾಗಿದ್ದು, ಬಡವರಿಗೆ ಆಹಾರ ಕಿಟ್ ವಿತರಣೆ ಮಾಡುವ ಜೊತೆಗೆ ಜಿಲ್ಲೆಯಲ್ಲಿನ ಆಸ್ಪತ್ತೆಗಳಿಗೆ ಆಂಬುಲೆನ್ಸ್ ಸೇವೆಯನ್ನು ಸಹ ಒದಗಿಸಿದೆ ಇವರ ಸೇವೆಯನ್ನು ಕ್ಷೇತ್ರದ ಜನತೆ ಮರೆಯಲಾರರು ಎಂದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಐವರು ಕಡು ಬಡವರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಈ ವೇಳೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸೇವಾ ಸಂಸ್ಥೆಯ ಪದಾಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.

By admin