ಚಾಮರಾಜನಗರ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾ ಘಟಕದ ವತಿಯಿಂದ ಆರೋಗ್ಯ ಮೇಳದ ಅಂಗವಾಗಿ ಕ್ಯಾನ್ಸರ್ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಮಂಗಳವಾರ (ಫೆ.೧೪) ನಗರದಲ್ಲಿ ಸೈಕಲ್ ರ್‍ಯಾಲಿ ನಡೆಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಚಾಮರಾಜೇಶ್ವರ ದೇವಾಲಯದ ಬಳಿ ರ್‍ಯಾಲಿಗೆ ಚಾಲನೆ ನೀಡಿದರು. ಬಳಿಕ ಬಿ. ರಾಚಯ್ಯ ಜೋಡಿ ರಸ್ತೆಯ ಮೂಲಕ ಸಾಗಿ ಜಿಲ್ಲಾಡಳಿತ ಭವನದಲ್ಲಿ ಸೈಕಲ್ ರ್‍ಯಾಲಿ ಮುಕ್ತಾಯವಾಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಎಂ. ನಾಗರಾಜು, ಜಿಲ್ಲಾ ಕಣ್ಗಾವಲು ಘಟಕದ ಸಿಬ್ಬಂದಿ, ವಿದ್ಯಾರ್ಥಿಗಳು, ಶಿಕ್ಷಕರು ರ್‍ಯಾಲಿಯಲ್ಲಿ ಪಾಲ್ಗೊಂಡರು.
