ಚಾಮರಾಜನಗರ: ನಗರಸಭೆ ವತಿಯಿಂದ ಮತದಾನದ ಜಾಗೃತಿಗಾಗಿ ನಗರದಲ್ಲಿಂದು ಅರಿವು ಜಾಥಾ ನಡೆಸಲಾಯಿತು.
ನಗರಸಭೆ ಕಚೇರಿ ಬಳಿ ಜಾಗೃತಿ ಜಾಥಾಗೆ ಆಹಾರ ಇಲಾಖೆಯ ಉಪನಿರ್ದೇಶಕರಾದ ಯೋಗಾನಂದ ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಆಯುಕ್ತರಾದ ಎಸ್.ವಿ. ರಾಮ್‌ದಾಸ್ ಅವರು ಮತದಾನದ ಮಹತ್ವ ಸಾರುವ ಉದ್ದೇಶದಿಂದ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ಪ್ರತಿಯೊಬ್ಬರೂ ಪ್ರಜಾಪ್ರಭುತ್ವ ಬಲಗೊಳಿಸುವ ಮತದಾನದಂತಹ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂಬುದಾಗಿದೆ. ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮನವಿ ಮಾಡಿದರು.
ಜಾಥಾದಲ್ಲಿ ನಗರಸಭೆ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡು ವಿವಿಧ ರಸ್ತೆಗಳಲ್ಲಿ ಸಂಚರಿಸಿ ಮತದಾನದ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಿದರು.
