:- ಮೈಸೂರು ನಗರದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ವಿಚಾರದಿಂದ ನಗರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಡುವ ಹಿತದೃಷ್ಟಿಯಿಂದ 2022ರ ಫೆಬ್ರವರಿ 28 ರ ರಾತ್ರಿ 10 ಗಂಟೆಯವರೆಗೂ ನಿಷೇಧಾಜ್ಞೆ ಹೊರಡಿಸಲಾಗಿದೆ,ಎಂದು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ, ಕಾಲೇಜಿನ ಮಕ್ಕಳಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದೆ0ಬ ಹಿತದೃಷ್ಟಿಯಿಂದ ಶಾಲಾ ಕಾಲೇಜುಗಳ ಆವರಣದ 200ಮೀ. ಪ್ರದೇಶದ ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ ನಡೆಸುವಂತಿಲ್ಲ ಹಾಗೂ ಶಾಲೆಗೆ ಸಂಬoಧಪಟ್ಟವರನ್ನು ಹೊರತುಪಡಿಸಿ ಅನಧೀಕೃತ ವ್ಯಕ್ತಿಗಳು ಸೇರುವಂತಿಲ್ಲ ಎಂದು ಅವರು ತಿಳಿಸಿದ್ದಾರೆ.