ಸರಗೂರು: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷದ ಸಂಘಟನೆಗೆ ಹೆಚ್ಚು ಶ್ರಮಿಸುತ್ತಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದಶರ್ಿ, ಮಾಜಿ ಎಂಎಲ್ಸಿ ಸಿದ್ದರಾಜು ಅವರಿಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದಾಪುರ ನಂದೀಶ್ ಒತ್ತಾಯಿಸಿದ್ದಾರೆ.
ದಕ್ಷಿಣ ಭಾರತದ ಕನರ್ಾಟಕದಲ್ಲಿ ಬಿಜೆಪಿ ಪಕ್ಷ ಬಲವರ್ಧನೆಗೊಂಡು ಸೂಕ್ತ ಬಹುಮತಗಳೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಮಾಜಿ ಎಂಎಲ್ಸಿ ಸಿದ್ದರಾಜು ಅವರ ಪಾತ್ರವೂ ಇದೆ. ಹೀಗಾಗಿ ಸಿಎಂ ಬಸವರಾಜು ಬೊಮ್ಮಾಯಿ ಸಕರ್ಾರದಲ್ಲಿ ಸಿದ್ದರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿಕೊಂಡು ಸಚಿವ ಸ್ಥಾನ ನೀಡಬೇಕು. ಆ ಮೂಲಕ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಳ್ಳಲು ಮುಂದಾಗಬೇಕು ಎಂದು ನಂದೀಶ್ ಮನವಿ ಮಾಡಿದ್ದಾರೆ.
ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುತ್ತಿರುವ ಸಿದ್ದರಾಜು ಅವರಿಗೆ ಬಿಜೆಪಿ ಸಚಿವ ಸ್ಥಾನವನ್ನು ನೀಡಬೇಕು. ಜತೆಗೆ ಪಕ್ಷ ಮತ್ತಷ್ಟು ಬಲಗೊಳ್ಳಲು ಮುಂದಾಗಬೇಕು ಎಂದು ಅವರು ಹೇಳಿದ್ದಾರೆ.