ಮೈಸೂರು: ಗ್ರಾಮಾಂತರ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ಚಾಮುಂಡೇಶ್ವರಿ ಕ್ಷೇತ್ರದ ಹಿನಕಲ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೋವಿಡ್ ಕೇರ್ ಕ್ಲಿನಿಕ್ ಆರಂಭಿಸಲಾಗಿದೆ.

ಮಹಾಮಾರಿ ಕೊರೊನಾ  ಎರಡನೇ ಅಲೆಗೆ ಸರಿಯಾಗಿ ಚಿಕಿತ್ಸೆ ಸಿಗದೆ ಗ್ರಾಮೀಣ ಭಾಗದ ಜನರು ಹಲವು ರೀತಿಯಲ್ಲಿ ಸಂಕಷ್ಟಕ್ಕೀಡಾಗಿದ್ದು ಇದನ್ನು ಮನಗಂಡ ಕಾಂಗ್ರೆಸ್ ಯುವ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ರಾಕೇಶ್ ಪಾಪಣ್ಣ ಅವರು ಸಿದ್ದರಾಮಯ್ಯನವರ ಹೆಸರಿನಲ್ಲಿ ಕೋವಿಡ್ ಕೇರ್ ಕ್ಲಿನಿಕ್ ಆರಂಭಿಸಲಾಗಿದ್ದು, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯನವರು ಉದ್ಘಾಟಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು ಗ್ರಾಮಾಂತರ ಪ್ರದೇಶದಲ್ಲಿ ಹೋಂ ಐಸೋಲೇಷನ್ ನಲ್ಲಿರುವ ಸೋಂಕಿತರು ಆಸ್ಪತ್ರೆಗೆ ತೆರಳಲು ಭಯ ಪಡುತ್ತಾರೆ. ಅಲ್ಲದೆ ಬಡವರು ಖಾಸಗಿ ಆಸ್ಪತ್ರೆಯವರು ವಿಧಿಸುತ್ತಿರುವ ದುಬಾರಿ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಈ ರೀತಿ ಸಮಸ್ಯೆಗಳಿರುವ ಚಾಮುಂಡೇಶ್ವರಿ ಕ್ಷೇತ್ರದ ಜನತೆಗೆ ಅನುಕೂಲವಾಗಲೆಂದು ಜಿಲ್ಲಾ ಪಂಚಾಯಿತಿ ಸದಸ್ಯ ರಾಕೇಶ ಪಾಪಣ್ಣ ಅವರ ನೇತೃತ್ವದಲ್ಲಿ ಕ್ಲಿನಿಕ್ ಅನ್ನು ಪ್ರಾರಂಭಿಸಿರುವುದು ಶ್ಲಾಘನೀಯ ಎಂದರಲ್ಲದೆ,  ಸುತ್ತಮುತ್ತಲ ಗ್ರಾಮಗಳ ಬಡಜನತೆ ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜನತೆಯಲ್ಲಿ ಮನವಿ ಮಾಡಿದರು.

ಈ ಕ್ಲಿನಿಕ್ ಗೆ ಬೇಕಾದ ವೈದ್ಯರು ಔಷಧಿಗಳು, ಬೆಡ್ ಗಳು ಹಾಗೂ ಇನ್ನಿತರ ಸೌಲಭ್ಯಗಳನ್ನು ರಾಕೇಶ್ ರವರು ಒದಗಿಸಿದ್ದಾರೆ. ಆದ್ದರಿಂದ ಸಾರ್ವಜನಿಕರು ಕೊರೋನಾ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಜನರು ಇಂತಹ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಪಂ  ಸದಸ್ಯ ಹಿನಕಲ್ ರಾಕೇಶ್ ಪಾಪಣ್ಣ, ಡಿ ರವಿಶಂಕರ್, ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ ಜೆ ವಿಜಯ್ ಕುಮಾರ್, ಮುಖಂಡರಾದ ಕೆ.ಜೆ.ನಾಗರಾಜು, ಹೊನ್ನಪ್ಪ, ದೇವರಾಜು, ಶ್ರೀನಿವಾಸ ಚಂದ್ರು, ಹಿನಕಲ್ ಪ್ರಕಾಶ್, ರಮೇಶ, ವೆಂಕಟೇಶ, ಕೀರ್ತಿ ರಾಜಣ್ಣ, ಸೋಮಣ್ಣ, ಬೈರ ನಾಯಕ, ಮಾಜಿ ಗ್ರಾಪಂ ಅಧ್ಯಕ್ಷ ಬಿ.ಎಂ.ಮಹೇಶ್ ಕುಮಾರ್ ಇದ್ದರು.

By admin