ಚಾಮರಾಜನಗರ: ವಿದ್ಯಾರ್ಥಿಗಳು ಪರೀಕ್ಷೆ ಸಂಬಂಧ ಎದುರಿಸುವ ಸಮಸ್ಯೆಗಳನ್ನು ಪರಿಹರಿಸಿ ಪರೀಕ್ಷಾ ಕಾರ್ಯವನ್ನು ಒತ್ತಡ ರಹಿತವಾಗಿ ಧೈರ್ಯದಿಂದ ನಿಭಾಯಿಸಲು ‘ಪರೀಕ್ಷಾ ಪೇ ಚರ್ಚಾ ಪ್ರಧಾನಮಂತ್ರಿಗಳೊಂದಿಗೆ ವಿದ್ಯಾರ್ಥಿಗಳ ನೇರ ಸಂವಾದ ಕಾರ್ಯಕ್ರಮ ನೆರವಾಗಲಿದೆ ಎಂದು ಚಾಮರಾಜನಗರ ತಾಲೂಕಿನ ಹೊಂಡರಬಾಳು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ೨೦೨೨ರ ಏಪ್ರಿಲ್ ೧ರಂದು ನಡೆಯಲಿರುವ ಪರೀಕ್ಷಾ ಪೇ ಚರ್ಚಾ ೫ನೇ ಕಾರ್ಯಕ್ರಮವಾಗಿದೆ. ಪ್ರಧಾನಮಂತ್ರಿಯವರು ಪರೀಕ್ಷೆ ಎದುರಿಸುವ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಈ ಹಿಂದೆ ೨೦೧೮, ೨೦೧೯, ೨೦೨೦, ೨೦೨೧ರಲ್ಲಿ ಪರೀಕ್ಷಾ ಪೇ ಚರ್ಚಾ ನೇರ ಸಂವಾದವು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದರು.

ಏಪ್ರಿಲ್ ೧ರಂದು ದೇಶಾದ್ಯಂತ ನಡೆಯಲಿರುವ ಪರೀಕ್ಷಾ ಪೇ ಚರ್ಚಾ ನೇರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ೧೫.೭ ಲಕ್ಷ ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದಾರೆ. ಕಾರ್ಯಕ್ರಮವು ನವದೆಹಲಿಯ ಟೌನ್‌ಹಾಲ್‌ನಲ್ಲಿರುವ ತಾಳ್ಕಟೋರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವು ದೂರದರ್ಶನದಲ್ಲಿ ನೇರ ಪ್ರಸಾರವಾಗುವುದಲ್ಲದೆ ಆಕಾಶವಾಣಿ, ಯು ಟ್ಯೂಬ್, ಪಿ.ಎಮ್.ಓ ಇಂಡಿಯಾ, ಡಿಡಿ ನ್ಯಾಶನಲ್, ರಾಜ್ಯಸಭಾ ಟಿ.ವಿ. ಸ್ವಯಂಪ್ರಭಾ ಟಿ.ವಿ ಸೇರಿದಂತೆ ಹಲವು ವಾಹಿನಿಗಳಲ್ಲಿ ಬಿತ್ತರಗೊಳ್ಳಲಿದೆ.

ಆನ್‌ಲೈನ್ ಮುಖಾಂತರ ವಿದ್ಯಾರ್ಥಿಗಳು ಪಾಠ-ಪ್ರವಚನ ಹಾಗೂ ಪರೀಕ್ಷೆಗಳನ್ನು ಎದುರಿಸಿ ಈಗ ಆಫ್‌ಲೈನ್ ಪರೀಕ್ಷೆ ಸಿದ್ದತೆಯಲ್ಲಿದ್ದಾರೆ. ಹೀಗಾಗಿ ಪರೀಕ್ಷಾ ಪೇ ಚರ್ಚಾ ಪ್ರಧಾನಮಂತ್ರಿ ಮೋದಿಯವರ ನೇರ ಸಂವಾದ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ದೇಶದಾದ್ಯಂತ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋ?ಕರು ಭಾಗವಹಿಸಿ ಕಾರ್ಯಕ್ರಮದ ನೆರವು ಪಡೆಯಲಿದ್ದಾರೆ. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆ ಕೇಳಲಿದ್ದಾರೆ. ಸೃಜನಾತ್ಮಕ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಆಯ್ಕೆಯಾದ ಮಕ್ಕಳಿಗೆ ಪ್ರಧಾನಮಂತ್ರಿಗಳ ವಿಶೇ? ಪ್ರಶಸ್ತಿ ಪತ್ರ ಹಾಗೂ ಪರೀಕ್ಷಾ ಪೇ ಚರ್ಚಾ ಕಿಟ್ ಅವರಿಗೆ ಸಿಗಲಿದೆ.

ಕೋವಿಡ್‌ನಿಂದಾಗಿ ಆನ್‌ಲೈನ್ ತರಗತಿಯಿಂದ ಆಫ್‌ಲೈನ್ ತರಗತಿಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ. ಈ ಬಾರಿಯ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಿಂದ ಪ್ರೇರಿತರಾಗುವ ವಿದ್ಯಾರ್ಥಿಗಳು ವಿಶೇ? ಸಾಧನೆ ಮಾಡಲಿದ್ದಾರೆ ಎಂಬುದಾಗಿ ಕೇಂದ್ರ ಸಚಿವರಾದ ಧಮೇಂದ್ರ ಪ್ರಧಾನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೊಂಡರಬಾಳು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ವಿ. ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.