ಬೆಂಗಳೂರು: ಕೇಂದ್ರ ಸರ್ಕಾರವು ಇತ್ತೀಚೆಗೆ ತೈಲ ವಸ್ತುಗಳಾದ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಪ್ರತಿ ಲೀಟರಿಗೆ ನೂರು ರೂಪಾಯಿಗಳನ್ನು ಹೆಚ್ಚಿಸಿರುವ ಬೆನ್ನಲ್ಲೇ ಕರ್ನಾಟಕ ಸರ್ಕಾರವು   ವಿದ್ಯುತ್  ಪ್ರತಿ ಯೂನಿಟ್ ಗೆ 30 ಪೈಸೆ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಾದ ಡಾ.  ಎಂ ವೆಂಕಟಸ್ವಾಮಿ ನೇತೃತ್ವದಲ್ಲಿ ಗಾಂಧಿನಗರದಲ್ಲಿರುವ ಅವರ ಮನೆ  ಮುಂದೆ ಪ್ರತಿಭಟನೆ ನಡೆಸಿದರು.

ಸರ್ಕಾರ ವಿದ್ಯುತ್ ದರ ಏರಿಕೆಯ ನಿರ್ಧಾರವನ್ನು ಖಂಡಿಸಿ ರಾಜ್ಯದ ಎಲ್ಲ  ಜಿಲ್ಲಾ ಕೇಂದ್ರಗಳಲ್ಲಿ ಆರ್ ಪಿ ಐ ಜಿಲ್ಲಾಧ್ಯಕ್ಷರು ಅವರವರ ಮನೆಗಳ ಮುಂದೆ    ಪ್ಲಕಾರ್ಡ್  ಹಿಡಿದು ಪ್ರತಿಭಟನೆ  ನಡೆಯುತ್ತಿದೆ ಎಂದರು. ಶೀಘ್ರವೇ ವಿದ್ಯುತ್ ದರ ಹಿಂಪಡೆಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು.

By admin