ಸರಗೂರು: ಕೋವಿಡ್-19 ಹಿನ್ನೆಲೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಸರಗೂರು ತಾಲೂಕಿನ ಕುಂದೂರು ಶ್ರೀ ಚಿಕ್ಕದೇವಮ್ಮನ ಬೆಟ್ಟದ ದೇವಸ್ಥಾನದ ಹಾಲುಗಡ ಜಾತ್ರೆಯನ್ನು ರದ್ದುಗೊಳಿಸಲಾಗಿದೆ.

ಇತ್ತೀಚಿಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿದರ್ೇಶನದಂತೆ ಹಾಲುಗಡ ಜಾತ್ರೆಯನ್ನು ರದ್ದುಗೊಳಿಸಲಾಗಿದ್ದು, ಮಾ.13ರಂದು ದೇವಸ್ಥಾನ ಮತ್ತು ಜಾತ್ರೆ ನಡೆಯುವ ಕಪಿಲ ನದಿ ದಡದ ಹಾಲುಗಡಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಆರ್ಚಕರಾದ ಮಹದೇವಸ್ವಾಮಿ ತಿಳಿಸಿದ್ದಾರೆ.

ಕಳೆದ ವರ್ಷವೂ ಕೊರೋನಾದಿಂದಾಗಿ ಜಾತ್ರೆ ರದ್ದಾಗಿತ್ತು. ಈ ಬಾರಿಯೂ ಜಾತ್ರೆ ರದ್ದುಗೊಳಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ದೇವಸ್ಥಾನದ ಕಮಿಟಿ ಸದಸ್ಯರು, ದೇವಸ್ಥಾನ ಆರ್ಚಕರು, ತಾಲೂಕು ಆಡಳಿತ ಮನವಿ ಮಾಡಿದೆ.

By admin