ಚಾಮರಾಜನಗರ: ಕೋವಿಡ್ ಮುಕ್ತ ಕರ್ನಾಟಕ ಮಾಡುವುದಷ್ಟೆ ರಾಜ್ಯ ಸರ್ಕಾರದ ಗುರಿಯಾಗಿದ್ದು, ಅದನ್ನು ಹೊರತು ಇನ್ಯಾವುದೂ ಇಲ್ಲ. ಹಾಗಾಗಿ ಮುಖ್ಯಮಂತ್ರಿಗಳ ಬದಲಾವಣೆಯ ವದಂತಿಗಳಿಗೆ ಪ್ರತಿಕ್ರಿಯೆ ನೀಡಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್  ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಕೋವಿಡ್ ನಿಯಂತ್ರಣ ಮಾಡುವ ದಿನಗಳಲ್ಲಿ ರಾಜಕಾರಣದ ಬೆಳವಣಿಗೆ ಮಾತನಾಡುವುದು ಸೂಕ್ತವಲ್ಲ ಎನ್ನುವ ರೀತಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವ ಸುರೇಶ್ ಕುಮಾರ್, ಮುಖ್ಯಮಂತ್ರಿಗಳ ಬದಲಾವಣೆ ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುವಂತಿಲ್ಲ  ಎನ್ನುವಂತೆ ಮಾತನಾಡಿದರು.

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿನ ಪ್ರಕರಣ ಕಡಿಮೆಯಾಗುತ್ತಿದೆ, ಲಾಕ್ ಡೌನ್ ಅನ್ ಲಾಕ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ತಜ್ಙರ ಮಾಹಿತಿ ಸಲಹೆ ಪಡೆದ ಬಳಿಕ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ ಸಚಿವರು ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಸೂಚನೆಯಂತೆ ಎಲ್ಲ ಕ್ಷೇತ್ರಗಳಲ್ಲಿ ಶಾಸಕರುಗಳು ಕೋವಿಡ್ ನಿಯಂತ್ರಣ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು.

By admin