ಚಾಮರಾಜನಗರ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕರ್ನಾಟಕ ಸರ್ಕಾರ ಬೆಂಗಳೂರು ವತಿಯಿಂದ ನೀಡಲಾಗುವ ವಿಪ್ರಶ್ರೀ ಪ್ರಶಸ್ತಿಯನ್ನು ಚಾಮರಾಜನಗರದ ಸಂಸ್ಕೃತಿ , ರಾಷ್ಟ್ರೀಯತೆ,ಶಿಕ್ಷಣ, ಸಮಾಜ ಸಂಘಟನೆಯಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಜೈಹಿಂದ್ ಪ್ರತಿಷ್ಟಾನದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ಅವರಿಗೆ ನೀಡಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಮಂಡ್ಯ ನಗರದ ಗಾಯತ್ರಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ ಹಾಗೂ ವಿಪ್ರಶ್ರೀ ಪುರಸ್ಕಾರ ಸಮಾರಂಭದಲ್ಲಿ ಸುರೇಶ ಋಗ್ವೇದಿರವರಿಗೆ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ವೇದ ಬ್ರಹ್ಮ ಶ್ರೀ ಭಾನುಪ್ರಕಾಶ್ ಶರ್ಮ, ರವರು ಮೈಸೂರು ಪೇಟ ,ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಸುಬ್ರಾಯಹೆಗಡೆ, ಬಾಲಕೃಷ್ಣ, ವತ್ಸಲಾ ನಾಗೇಶ್ ಮಂಡ್ಯ ಜಿಲ್ಲಾ ಬ್ರಾಹ್ಮಣ ಸಬಾದ ಶಂಕರ್ ನಾರಾಯಣ ಶಾಸ್ತ್ರಿ ಬೆಳ್ಳೂರು ಶಿವರಾಮ್ ಮುಂತಾದವರು ಉಪಸ್ಥಿತರಿದ್ದರು.
ಸುರೇಶನ ಋಗ್ವೇದಿಯವರು ಕಳೆದ ಮೂರು ದಶಕಗಳಿಂದ ನಿರಂತರವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪರಿಮಿತವಾದ ಕಾರ್ಯಕ್ರಮಗಳ ಸಂಘಟನೆಯನ್ನು ಮಾಡಿ ಗಡಿ ಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು, ಜೈ ಹಿಂದ್ ಪ್ರತಿಷ್ಠಾನ ,ಶ್ರೀ ಕೃಷ್ಣ ಪ್ರತಿಷ್ಠಾನ, ಋಗ್ವೇದಿ ಯುತ್ ಕ್ಲಬ್,ಜಿಲ್ಲಾ ಯುವಜನ ಸಂಘಟನೆಗಳ ಒಕ್ಕೂಟ ಅಧ್ಯಕ್ಷರಾಗಿ ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸದಾ ಕಾಲ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಋಗ್ವೇದಿ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ನಿಗಮ ಶ್ರೀ ನೀಡಿ ಗೌರವಿಸಿದೆ.
ವಿಪ್ರಶ್ರೀ ಪ್ರಶಸ್ತಿ ಪುರಸ್ಕೃತರಾದ ಸುರೇಶ್ ಋಗ್ವೇದಿವರಿಗೆ ಹಲವಾರು ಸಂಘ ಸಂಸ್ಥೆಗಳು ಅಭಿನಂದನೆ ಸಲ್ಲಿಸಿದೆ .
