ಸರಗೂರು ಪಟ್ಟಣ ಪಂಚಾಯಿತಿಯ ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ 12 ವಾಡರ್್ಗಳಲ್ಲಿಯೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ನಾಮಧಾರಿಗೌಡ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸರಗೂರು ಪಟ್ಟಣ ಪಂಚಾಯಿತಿ ಚುನಾವಣೆ ಕಾರ್ಯಕರ್ತರ ಸಭೆಯನ್ನು ಅವರು ಮಾತನಾಡಿದರು.

ಪಕ್ಷದ ಕಾರ್ಯಕರ್ತರು, ಮುಖಂಡರು ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಪಕ್ಷದ ಗೆಲುವಿಗೆ ಎಲ್ಲರೂ ಶ್ರಮಿಸಬೇಕು. ಪಕ್ಷದಲ್ಲಿದ್ದುಕೊಂಡು ವಿರೋಧಿ ಕೆಲಸ ಮಾಡಿದರೆ ಕಟ್ಟು ನಿಟ್ಟಿನ ಕ್ರಮವಹಿಸಲಾಗುವುದು. ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಶಿಸ್ತು ಇದ್ದು, ಅದನ್ನು ಎಲ್ಲರೂ ಪಾಲಿಸಬೇಕು. ಶಿಸ್ತು ಇಲ್ಲದಿದ್ದರೆ ಪಕ್ಷ ಉಳಿಯುವುದಿಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್ನ ಸದಸ್ವತ್ಯವನ್ನು ಹೊಂದಿರುವಂಥವರಿಗೆ ಮಾತ್ರ ಪಕ್ಷ ಟಿಕೆಟ್ ನೀಡಲಿದೆ. ಸ್ಕ್ರೀನ್ ಕಮಿಟಿ ರಚಿಸಿಕೊಂಡು ಟಿಕೆಟ್ ನೀಡುವ ಕುರಿತು ಚಚರ್ಿಸಲಾಗುವುದು. ಕಾರ್ಯಕರ್ತರು ಎಲ್ಲ ವಾಡರ್್ಗಳಿಗೂ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಿ. ಅವಕಾಶ ವಂಚಿತ ಸಮಾಜ, ವ್ಯಕ್ತಿಗೆ ಅವಕಾಶ ಮಾಡಿಕೊಡಬೇಕಿದೆ ಎಂದು ಅವರು ತಿಳಿಸಿದರು.

ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಪಟ್ಟಣ ಪಂಚಾಯಿತಿ ಸದಸ್ಯರ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತಗಳಿಸುವ ಮೂಲಕ ಪಟ್ಟಣ ಪಂಚಾಯಿತಿ ಅಧಿಕಾರ ಹಿಡಿಯಲಿದೆ. ಕಾಂಗ್ರೆಸ್ ಪಕ್ಷ ಪಟ್ಟಣದ ನಿವಾಸಿಗಳಿಗೆ ಹಲವು ಸೌಲಭ್ಯಗಳನ್ನು ನೀಡಿದೆ. ಮಾಜಿ ಸಂಸದ ಆರ್.ಧ್ರುವನಾರಾಯಣ್, ಮಾಜಿ ಶಾಸಕ ದಿ.ಚಿಕ್ಕಮಾದು ಅವರು ಪಟ್ಟಣದ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರ ಹಾದಿಯಲ್ಲಿ ಶಾಸಕನಾಗಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ ಎಂದು ವಿವರಿಸಿದರು.

ಮುಂದಿನ ದಿನಗಳಲ್ಲಿಯೂ ನೀಡುತ್ತೇನೆ. ಹೀಗಾಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯಥರ್ಿಗಳ ಗೆಲುವಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು. ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಪಟ್ಟಣ ಪಂಚಾಯತ್ ಚುನಾವಣೆ ದಿಕ್ಸೂಚಿಯಾಗಲಿದ್ದು, ಇದಕ್ಕಾಗಿ ಎಲ್ಲರೂ ಸಹಕರಿಸಬೇಕು. 2023ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಪಟ್ಟಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ರಾಜ್ಯ ಸರಕಾರದಿಂದ ಮತ್ತಷ್ಟು ಅನುದಾನ ತಂದು ಪಟ್ಟಣದ ಆಭಿವೃದ್ಧಿಗೆ ಶ್ರಮಿಸಬಹುದು. ಹೀಗಾಗಿ ಎಲ್ಲರೂ ತಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಬೇಕು. ಎಲ್ಲ ಸಮಾಜಕ್ಕೂ ಸಮಾನ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದರು.

ಕೆಪಿಸಿಸಿ ವೀಕ್ಷಕ, ಸರಗೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ವರುಣ್ ಮಹೇಶ್ ಮಾತನಾಡಿ, ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕು. ಪಟ್ಟಣ ಪಂಚಾಯಿತಿಯಿಂದ ಪುರಸಭೆಗೆ ಮೇಲ್ದಜರ್ೆಗೆ ಏರಲು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತರಾಗಬೇಕು ಎಂದು ಸಲಹೆ ನೀಡಿದರು.

ಜಿ.ಪಂ.ಮಾಜಿ ಸದಸ್ಯರಾದ ಚಿಕ್ಕವೀರನಾಯಕ, ಪಿ.ರವಿ, ಎಸ್.ಎಸ್.ಪ್ರಭುಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾದಪ್ಪ, ಏಜಾಜ್ಪಾಷಾ, ಪ್ರಧಾನ ಕಾರ್ಯದಶರ್ಿ ಚಲುವರಾಜು, ಟೌನ್ ಅಧ್ಯಕ್ಷ ಮಂಜುನಾಥ್, ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ನಯಾಜ್, ಶಿವರಾಜು, ಮುಖಂಡರಾದ ಶಂಭುಲಿಂಗನಾಯಕ, ನಂದಿನಿ ಚಂದ್ರಶೇಖರ್, ಎಸ್.ಆರ್.ಜಯಮಂಗಳ, ರಾಜನಾಯಕ, ಎಂ.ಎನ್.ಭೀಮರಾಜ್, ಕೃಷ್ಣೇಗೌಡ, ಎಂ.ಕೆ.ಹರಿದಾಸ್, ಸರಗೂರು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ಎಸ್.ಎಂ.ನಾಗಯ್ಯ, ಮಧುಸೂದನ್, ಯೋಗೀಶ್, ಶ್ರೀನಿವಾಸ್, ಎಸ್.ಎನ್.ನಾಗರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

By admin