ಗುಂಡ್ಲುಪೇಟೆ: ತಾಲೂಕಿನ ಕಬ್ಬಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಯುವ ನಾಯಕ ಎಚ್.ಎಂ. ಗಣೇಶ್‍ಪ್ರಸಾದ್ 2 ಲಕ್ಷ ರೂ. ನೆರವು ನೀಡಿದ್ದಾರೆ.

ಕಬ್ಬಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಚಾಮುಂಡೇಶ್ವರಿ ದೇವಸ್ಥಾನ ಕಾಮಗಾರಿ ಶೇ.90 ರಷ್ಟು ಮುಗಿದಿತ್ತು. ಉಳಿದ ಕಾಮಗಾರಿಗೆ ಹಣ ಇಲ್ಲದ ವಿಷಯ ಅರಿತು ಹಣ ನೀಡಿದ್ದಾರೆ.

ಚಾಮುಂಡೇಶ್ವರಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಕೆ.ಎಸ್. ಮಹೇಶ್, ಕಾರ್ಯದರ್ಶಿ ಕಬ್ಬಹಳ್ಳಿ ಶಾಂತಪ್ಪ ಅವರಿಗೆ 1 ಲಕ್ಷ ರೂ. ಹಣ, ಒಂದು ಲಕ್ಷ ರೂ. ಚೆಕ್ ವಿತರಿಸಿ ಶೀಘ್ರ ಕಾಮಗಾರಿ ಮುಗಿಸುವಂತೆ ತಿಳಿಸಿದರು.

ಗ್ರಾಪಂ ನೂತನ ಸದಸ್ಯ ಕೆ.ಎಸ್. ಶಿರಿಯಪ್ಪ, ಯುವ ಕಾಂಗ್ರೆಸ್ ಮುಖಂಡ ಕಬ್ಬಹಳ್ಳಿ ದೀಪು, ಜೆಡಿಎಸ್ ಮುಖಂಡ ಕಮರಹಳ್ಳಿ ಕುಮಾರ್ ಸೇರಿದಂತೆ ಇತರರು ಇದ್ದರು.

ವರದಿ: ಬಸವರಾಜು ಎಸ್ ಹಂಗಳ

By admin