Month: June 2021

ನಾಡು ಕಂಡ ಶ್ರೇಷ್ಠ ಕವಿ ಡಾ: ಸಿದ್ಧಲಿಂಗಯ್ಯ:ಸಿಎಂ

ಬೆಂಗಳೂರು: ಡಾ: ಸಿದ್ಧಲಿಂಗಯ್ಯ ಅವರು ನಮ್ಮ ನಾಡು ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ದಲಿತರ ನೋವನ್ನು ಸಮರ್ಥಕವಾಗಿ ಅಕ್ಷರ ರೂಪಕ್ಕೆ ಇಳಿಸಿ, ಅವರನ್ನು ಜಾಗೃತಿಗೊಳಿಸಿದವರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಬೆಂಗಳೂರಿನ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಕವಿ ಚಿಂತಕ ಮತ್ತು…

ಭಾರತ ಕ್ರಿಕೆಟ್ ತಂಡಕ್ಕೆ ಪೂನಂ ಪಾಂಡೆ ಕೊಟ್ಟ ಆಫರ್!

ನವದೆಹಲಿ: ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ಟೆಸ್ಟ್ ವಿಶ್ವಚಾಂಪಿಯನ್‍ ಶಿಪ್ ಗೆದ್ದರೆ ಬೆತ್ತಲೆಯಾಗುವುದಾಗಿ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಮತ್ತೊಮ್ಮೆ ಹೇಳಿರುವುದು ಪಡ್ಡೆ ಹುಡುಗರ ಎದೆಯಲ್ಲಿ ಅವಲಕ್ಕಿ ಕುಟ್ಟುವಂತೆ ಮಾಡಿದೆ. ಹಾಗೆನೋಡಿದರೆ ಇಂತಹ ಹೇಳಿಕೆಗಳನ್ನು ನೀಡುವುದು ಪೂನಂ ಪಾಂಡೆಗೇನು…

ಬಟ್ಟೆ ಅಂಗಡಿ ತೆರೆಯಲು ಅವಕಾಶ ನೀಡಲು ಮನವಿ

ಮೈಸೂರು: ಬಟ್ಟೆ ಅಂಗಡಿಗಳನ್ನು ಪ್ರತಿದಿನ ಕನಿಷ್ಠ ನಾಲ್ಕು ಗಂಟೆಗಳ ಕಾಲ ವ್ಯಾಪಾರ ಮಾಡಲು ಅನುವು ಮಾಡಿಕೊಡಬೇಕೆಂದು ಜವಳಿ ಮತ್ತು ಸಿದ್ಧ ಉಡುಪುಗಳ ವರ್ತಕರ ಸಂಘದ ವತಿಯಿಂದ ಶಾಸಕ ಎಸ್ ಎ ರಾಮದಾಸ್ ಅವರಿಗೆ ಮನವಿ ಸಲ್ಲಿಸಲಾಯಿತು. ನಗರದ ಸಿದ್ಧಾರ್ಥ ಲೇಔಟ್ ನಲ್ಲಿರುವ…

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಸುವರ್ಣ ಬೆಳಕು ಫೌಂಡೇಷನ್ ವತಿಯಿಂದ ಮೂರು ಮಂದಿ ಯೋಗ ಸಾಧಕರಿಗೆ ಸನ್ಮಾನ.

ಮೈಸೂರು. ಜು ೨೧ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂರು ಮಂದಿ ಯೋಗ ಸಾಧಕರಿಗೆ ಸನ್ಮನಾ ಹಾಗೂ ಯೋಗ ಪಟುಗಳಿಂದ ಕಠಿಣ ಆಸನ ಸೂರ್ಯನಮಸ್ಕಾರ ಪ್ರದರ್ಶನ ಮಾಡಲಾಯಿತು.ಮೈಸೂರು ಲಕ್ಷೀಪುರಂ ಹೊಯ್ಸಳ ಕರ್ನಾಟಕ ಸಂಘದಲ್ಲಿ ಸುವರ್ಣ ಬೆಳಕು ಫೌಂಡೇಷನ್ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಯೋಗಪಟುಗಳಾದ…

ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ

ಮೈಸೂರು: ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ಮತ್ತು ಮೈಸೂರು ಕಲಾವಿದರ ಸಮೂಹ ವತಿಯಿಂದ ವಿಶ್ವಸಂಗೀತ ದಿನಾಚರಣೆ ಅಂಗವಾಗಿ ಸಾಧಕರಿಗೆ ಸಂಗೀತ ‘ಕಲಾ ಸಾರಥಿ’ ಪ್ರಶಸ್ತಿ ಪ್ರದಾನ‌ ಮಾಡಲಾಯಿತು ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗೀತ…

ಯಗಚಿ ಜಲಾಶಯ ಭರ್ತಿಗೆ ಒಂದಡಿ ಬಾಕಿ

ಹಾಸನ: ಬೇಲೂರು ತಾಲೂಕಿನ ಯಗಚಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯ ಭರ್ತಿಯಾಗಲು ಕೇವಲ ಒಂದು ಅಡಿಯಷ್ಟೇ ಬಾಕಿಯಿದ್ದು, ಯಾವುದೇ ಕ್ಷಣದಲ್ಲಾದರೂ ಕ್ರಸ್ಟ್ ಗೇಟ್ ಮುಖಾಂತರ ನದಿಗೆ ನೀರು ಹೊರಬಿಡುವ ಸಾಧ್ಯತೆ ಇರುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ…

ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಶುರು…!

ಕೊರೊನಾ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್ ಮತ್ತೆ ಕಲರ್ಸ್ ಕನ್ನಡದಲ್ಲಿ ಶುರುವಾಗಲಿದ್ದು, ಬಿಗ್ ಬಾಸ್ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಎರಡನೇ ಬಾರಿಗೆ ಸ್ಪರ್ಧಿಗಳು ಮನೆಯೊಳಗೆ ಕಾಲಿಡಲಿದ್ದಾರೆ. ಇದು ಮೊದಲಿನಂತೆಯೇ ನೋಡುಗರಿಗೆ ಮಜಾ ಕೊಡುತ್ತಾ? ಮತ್ತೆ ಬಿಗ್ ಬಾಸ್ ನಲ್ಲಿ…

ಜೂ.21ರಿಂದ ಬೆಂಗಳೂರಿನಲ್ಲಿ  2000 ಬಿಎಂಟಿಸಿ ಬಸ್ ಸಂಚಾರ

ಬೆಂಗಳೂರು: ಸುಮಾರು ಎರಡು ತಿಂಗಳ ಬಳಿಕ ಕೆಎಸ್ ಆರ್ ಟಿಸಿ ಬಸ್ ಗಳು ಜೂನ್.21 ರಿಂದ ರಸ್ತೆಗೆ ಇಳಿಯಲಿದ್ದು, ರಾಜಧಾನಿ ಬೆಂಗಳೂರಿನಲ್ಲಿ 2000 ಬಸ್‌ಗಳು ಕೋವಿಡ್ ನಿಯಮ ಪಾಲಿಸಿಕೊಂಡು ಸಂಚಾರ ನಡೆಸಲಿವೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಹೇಳಿದ್ದಾರೆ.…

ಮೈಸೂರು ಹೊರತು ಪಡಿಸಿ , 16 ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದ್ದು, 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡಲಾಗಿದೆ. ಆದರೆ ಮೈಸೂರಿನಲ್ಲಿ ಪಾಸಿಟಿವಿಟಿ ದರ ಶೇ.10 ಕ್ಕಿಂತ ಹೆಚ್ಚು ಇರುವುದರಿಂದ ಲಾಕ್ ಡೌನ್ ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ.…

ನಂಜನಗೂಡಿನ  ಅರಿಯೂರು ಗ್ರಾಮ ಸೀಲ್ ಡೌನ್

ಮೈಸೂರು: ಒಂದೇ ಗ್ರಾಮದ ಮೂವತ್ತೈದು ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿರುವ ಕಾರಣ ಜಿಲ್ಲೆಯ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ. ಹಾಗೆನೋಡಿದರೆ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಕಡಿಮೆಯಾಗುವ ಲಕ್ಷಣ ಕಂಡು ಬರುತ್ತಿಲ್ಲ. ಜತೆಗೆ ಸಾವಿನ ಸಂಖ್ಯೆಯೂ ನಿಲ್ಲುತ್ತಿಲ್ಲ.…

ಕಬಿನಿ ಜಲಾಶಯದ ನದಿಪಾತ್ರದವರಿಗೆ ಎಚ್ಚರಿಕೆಯಿಂದಿರಲು ಸೂಚನೆ

ಮೈಸೂರು: ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿರುವ ಕಾರಣ ಜಲಾಶಯದಿಂದ ಸುಮಾರು ಐದು ಸಾವಿರ ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈ ಕುರಿತಂತೆ ಪ್ರಕಟಣೆ ನೀಡಿರುವ ಹೆಚ್.ಡಿ.ಕೋಟೆ ತಾಲ್ಲೂಕಿನ, ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರ…

ಅಸಂಘಟಿತ ಕಾರ್ಮಿಕರಿಗೆ 2ಸಾವಿರ ನೆರವು ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ಜಾರಿಗೊಳಿಸಿದ ಪರಿಣಾಮವಾಗಿ ಅಸಂಘಟಿತ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ದರ್ಜಿಗಳು, ಮೆಕಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸಂಕಷ್ಟದಲ್ಲಿದ್ದು ಅವರಿಗೆ ಒಂದು ಬಾರಿಯ ಪರಿಹಾರವಾಗಿ ಎರಡು ಸಾವಿರ ರೂ.ಗಳ…

ಕೃಷಾಕಣಿವೆ ನಿಯಂತ್ರಣ ನಿರ್ವಹಣೆಗೆ ‘ಮಹಾ’ ಒಪ್ಪಿಗೆ

ಬೆಂಗಳೂರು: ಕೃಷ್ಣ ಮತ್ತು ಭೀಮಾ ಜಲಾನಯನ ಪ್ರದೇಶದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಮತ್ತು ಕರ್ನಾಟಕ ಉಭಯ ರಾಜ್ಯಗಳು ಒಪ್ಪಿಗೆ ಸೂಚಿಸಲಾಗಿದೆ ಎಂದು ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ “ಕೃಷಾಕಣಿವೆ ಪಾತ್ರದಡಿ ಸಮರ್ಪಕ ನಿಯಂತ್ರಣ ಹಾಗೂ…

ಪ್ರವಾಹ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯಗಳಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿಗಳನ್ನು ಸಮರ್ಥ ರೀತಿಯಲ್ಲಿ ಎದುರಿಸಲು ಅಗತ್ಯ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಲು ಇಪ್ಪತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಪ್ಪತ್ತು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್…

ಒಂದು ರೂ.ಗೆ ಪೆಟ್ರೋಲ್ ಹಾಕಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮೈಸೂರು: ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‍ ನಿಂದ ನೂರು ಮಂದಿ ಸಾರ್ವಜನಿಕರಿಗೆ ನಗರದ ಆರ್ ಟಿ ಒ ಕಚೇರಿ ಬಳಿಯಲ್ಲಿರುವ ಪೆಟ್ರೋಲ್ ಬಂಕ್ ನಲ್ಲಿ ಒಂದು ರೂ.ಗೆ ಪೆಟ್ರೋಲ್ ಹಾಕಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರ…