24 ತೆಲುಗು ಶೆಟ್ಟರ ಸಂಘ(ರಿ)ದ ಅಧ್ಯಕ್ಷರಾದ ಶ್ರೀ ಮಂಜುನಾಥ ಶೆಟ್ಟಿ ಅವರು ಸರಸ್ವತಿಪುರಂ ಮೈಸೂರಿನಲ್ಲಿರುವ, ಸಂಸ್ಥೆಯ ವಿದ್ಯಾರ್ಥಿ ನಿಲಯದಲ್ಲಿ ಧ್ವಜಾರೋಹಣ ಮತ್ತು ಗಿಡ ನೆಡುವುದರ ಮೂಲಕ 75ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಮಾತನಾಡಿದ ಶ್ರೀ ಮಂಜುನಾಥಶೆಟ್ಟಿ ಅವರು 75ನೆಯ ಸ್ವಾತಂತ್ರ್ಯ ದಿನಾಚರಣೆಯ ಸಂಧರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಕೃತಜ್ಞತೆ ಸಲ್ಲಿಸುತ್ತ, ಸಾಂವಿಧಾನಿಕ ಆಶೋತ್ತರಗಳನ್ನು ಸ್ಮರಿಸಿದರು. ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳುವತ್ತ ದೇಶದ ಜನತೆಯು ಸಾಗಬೇಕಿರುವ ಮಾರ್ಗಗಳ ಕುರಿತು ಮಾತನಾಡಿ ನಾಡಿನ ಸಮಸ್ತ ಜನತೆಗೆ ಅಮೃತ ಮಹೋತ್ಸವದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ನಾಗರಾಜು ಶೆಟ್ಟಿ ಮತ್ತು ಪದಾಧಿಕಾರಿಗಳಾದ ಶ್ರೀ ಬಾಲಸುಬ್ರಹ್ಮಣ್ಯ, ಸಂಸ್ಥೆಯ ಇನ್ನಿತರ ಸದಸ್ಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.