ಮೈಸೂರು -5 ತಮಿಳುನಾಡಿನ ಚೆನ್ನೈನಲ್ಲಿ ನಡೆದ 42 ನೇ ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ(30+) ಪುರುಷರ ವಯೋಮಿತಿ ಹೈ ಜಂಪ್ ಲಾಂಗ್ ಜಂಪ್ ತ್ರಿಬಲ್ ಜಂಪ್ ಇವೆಂಟಿನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರವಿ ಟಿಎ, ರವರು 3 ಚಿನ್ನದ ಪದಕವನ್ನು ಪಡೆದಿದ್ದಾರೆ.ಪ್ರಸ್ತುತ ಇವರು ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಅಥ್ಲೆಟಿಕ್ಸ್ ತರಬೇತುದಾರರಾಗಿ ಮಾನಸಗಂಗೋತ್ರಿಯ ಕ್ರೀಡಾ ಕಾರ್ಯದರ್ಶಿ ಆಗಿಯೂ ಕಾರ್ಯನಿರ್ವಹಿಸುತ್ತಿದ್ದು ಮೈಸೂರು ವಿಶ್ವವಿದ್ಯಾನಿಲಯಕ್ಕೆ ನೌಕರನಾಗಿ ಕ್ರೀಡಾಪಟುವಾಗಿ ತರಬೇತುದಾರರಾಗಿ ಘನತೆ ಗೌರವವನ್ನು ತಂದುಕೊಟ್ಟಿದ್ದಾರೆ ಹಾಗೂ ಮುಂಬರುವ ಏಷ್ಯನ್ ಕ್ರೀಡಾಕೂಟಕ್ಕೆ ಹಾಗೂ ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆ ಆಗಿದ್ದಾರೆ