ಗುಂಡ್ಲುಪೇಟೆ: ಕಳೆದ ಎರಡು ದಿನಗಳ ಹಿಂದೆ ಅಕ್ರಮ ಬೇಟೆಗೆ ತೆರಳುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದಾಗ ನಾಡ ಬಂದೂಕು ಎಸೆದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪಟ್ಟಣ ಠಾಣೆ ಪೊಲೀಸರು ಬುಧವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭೀಮನಬೀಡು ಗ್ರಾಮದ ಕುಂಟಾ(ಕೃಷ್ಣ) ಬಂಧಿತ ಆರೋಪಿ. ಗ್ರಾಮದ ಹೊರವಲಯದ ಗುಡ್ಡದಲ್ಲಿ ಆರೋಪಿ ಓಡಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಸಬ್ ಇನ್ಸ್ ಪೆಕ್ಟರ್ ಜೆ. ರಾಜೇಂದ್ರ ಮತ್ತು ತಂಡ ದಾಳಿ ನಡೆಸಿ ಆತನನ್ನು ಬಂಧಿಸಿದ್ದಾರೆ.
ದಾಳಿ ವೇಳೆ ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ್, ಐಎಸ್ಟಿ ಇನ್ಸ್ ಪೆಕ್ಟರ್ ಚೆನ್ನನಾಯಕ ಸೇರಿದಂತೆ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಬಸವರಾಜು ಎಸ್ ಹಂಗಳ