ಚಾಮರಾಜನಗರ: ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ವರ್ತಕರ ಕ್ಷೇತ್ರದಿಂದ ಸ್ಪರ್ಧಿಸಿರುವ ವೆಂಕಟರಾವ್ ಭಾನುವಾರ ಮತದಾನ ಮಾಡಿದರು.
ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಚುನಾವಣೆ ಸಂಬಂಧ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯಲ್ಲಿ ಬರುವ ೧೧ ಕೃಷಿಕ ಕ್ಷೇತ್ರ ಮತ್ತು ೦೧ ವರ್ತಕರ ಕ್ಷೇತ್ರಗಳಿಗೆ ಭಾನುವಾರ ಮತದಾನ ನಡೆಯಿತು.
ಏಪ್ರಿಲ್ ೨೦ರಂದು ಬೆಳಿಗ್ಗೆ ೮ ಗಂಟೆಯಿಂದ ಮತ ಎಣಿಕೆ ಕಾರ್ಯವು ಯೂನಿವರ್ಸಲ್ ಸ್ಕೂಲ್, ಸತ್ತಿರಸ್ತೆ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ, ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿಪೂರ್ವ ಕಾಲೇಜು, ಗುಂಡ್ಲುಪೇಟೆ ಇಲ್ಲಿ ಮಸ್ಟರಿಂಗ್, ಡೀಮಸ್ಟರಿಂಗ್ ಮತ್ತು ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.