ಕೆ.ಆರ್.ನಗರ: ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿರುವ ಬಿಜೆಪಿ ಕಛೇರಿಯಲ್ಲಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷ ಹೊಸಹಳ್ಳಿವೆಂಕಟೇಶ್ ಮತ್ತು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ತಾರಾಸುಂದರೇಶ್ ಅವರು ವೈಯುಕ್ತಿಕ ಆಹಾರದ ಕಿಟ್‌ಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಮಂಗಳಾಸೋಮಶೇಖರ್ ಅವರು ಕೊರೊನಾ ಎರಡನೇ ಅಲೆ ಅಪ್ಪಳಿಸುವುದನ್ನು ತಡೆಯಲು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನತೆ ಕಡ್ಡಾಯವಾಗಿ ಪಾಲಿಸಿ ಸೋಂಕು ಹೆಚ್ಚದಂತೆ ತಡೆಯಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ದೇಶದ ಜನರ ಆರೋಗ್ಯದ ಹಿತದೃಷ್ಠಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಸಂಕಷ್ಟದ ಸಮಯದಿಂದ ಪಾರಾಗಲು ಕೆಲವು ನಿಯಮ ಜಾರಿ ಮಾಡಿದ್ದು ನಾವು ಅವುಗಳನ್ನು ಪಾಲಿಸಿದರೆ ಭವಿಷ್ಯದಲ್ಲಿ ಉತ್ತಮ ದಿನಗಳು ಬರಲಿವೆ ಎಂದು ತಿಳಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷೆ ತಾರಾಸುಂದರೇಶ್ ಮಾತನಾಡಿ ಸಂಕಷ್ಠದ ಸಮಯದಲ್ಲಿ ಉಳ್ಳವರು ಬಡವರು ಮತ್ತು ನೊಂದವರಿಗೆ ಸಹಾಯ ಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ತಿಳಿಸಿದರು.ಪ್ರಸ್ತುತ ಕೆಲವರಿಗೆ ಆಹಾರದ ಕಿಟ್‌ಗಳನ್ನು ನೀಡಿದ್ದು ಮುಂದೆ ಅಗತ್ಯವಿದ್ದರೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಮಾರ್ಗದರ್ಶನ ಪಡೆದು ಮತ್ತಷ್ಟು ಮಂದಿಗೆ ನಾನು ಸಹಾಯ ಮಾಡುತ್ತೇನೆಂದು ಘೋಷಿಸಿದರು.
ಉಪಾಧ್ಯಕ್ಷ ಉಮಾಶಂಕರ್, ಪ್ರಧಾನ ಕಾರ್ಯದರ್ಶಿ ಮಾರ್ಕಂಡೇಯಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಗೋಪಾಲರಾಜು, ಬಿಜೆಪಿ ಯುವ ಮುಖಂಡ ಚಿರಾಗ್ ಪಟೇಲ್ ಮತ್ತಿತರರು ಇದ್ದರು.