ಸರಗೂರು: ತಾಲೂಕಿನ ಚಾಮಲಾಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿ ಹರಿಕಾರಕ ಡಾ.ಬಾಬು ಜಗಜೀವನ್‌ರಾಂ ಅವರ ಜಯಂತಿ ಕಾರ್ಯಕ್ರಮವನ್ನು ಬಹಳ ವಿಶಿಷ್ಟವಾಗಿ ಆಚರಿಸಲಾಯಿತು.
ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂಬೇಡ್ಕರ್, ಬಾಬು ಜಗಜೀವನ್‌ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಗ್ರಾಮವನ್ನು ದೀಪಾಲಂಕಾರದಿಂದ ಅಲಂಕೃತಗೊಳಿಸಲಾಗಿತ್ತು. ಗ್ರಾಮದ ಯುವಕರು ಬಣ್ಣ ಬಳಿದುಕೊಂಡು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಸರಗೂರು ಪೊಲೀಸ್ ಠಾಣೆ ಪಿಎಸ್‌ಐ ಶ್ರವಣದಾಸ್‌ರೆಡ್ಡಿ ಮಹಾನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಹಾನೀಯರ ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಅಳವಡಿಸಿಕೊಳ್ಳಬೇಕು. ಎಲ್ಲರೂ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಗ್ರಾಮದ ವಿದ್ಯಾರ್ಥಿಗಳಿಗೆ ಓದಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕು. ವಿದ್ಯಾರ್ಥಿಗಳ ಜ್ಞಾರ್ನಾಜನೆಗೆ ಅನುವು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಳ್ಳೂರು ರವಿಕುಮಾರ್ ಮಾತನಾಡಿ, ಹಸಿರು ಕ್ರಾಂತಿ ಹರಿಕಾರಕ ಕೃಷಿಯಲ್ಲಿ ಮಾಡಿದ ಸಾಧನೆಗಳನ್ನು ಎಲ್ಲರೂ ಮೆಲುಕು ಹಾಕಬೇಕು. ಅಂಬೇಡ್ಕರ್ ಅವರು ಎಲ್ಲರಿಗೂ ಅನುಕೂಲವಾಗಲು ಬೃಹತ್ ಸಂವಿಧಾನವನ್ನು ನೀಡಿದ್ದು, ಎಲ್ಲರೂ ಅದನ್ನು ಗೌರವಿಸಬೇಕು. ಜತೆಗೆ ಅದರ ಉಳಿವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಯುವ ಮುಖಂಡ ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಗೋವಿಂದನಾಯಕ, ಶಿವಚೆನ್ನಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಅಧ್ಯಕ್ಷ ಸಿ.ಜಿ.ಬಸವರಾಜು, ಸಿದ್ದರಾಜು, ಶಂಕರ್, ಶಿವರಾಜ್, ಬಸವರಾಜ್, ಜೀವನ್, ನಿತೇಶ್, ದರ್ಶನ್, ವಕೀಲ ಅಭಿಲಾಷ್, ಗ್ರಾಮದ ಯಜಮಾನರಾದ ಚೆನ್ನಯ್ಯ, ಕೂಸಯ್ಯ, ಮಾರಯ್ಯ, ನಾಗೇಂದ್ರ, ರಾಜಯ್ಯ, ಮಹದೇವಯ್ಯ, ಬಸವರಾಜು, ಶಿವಲಿಂಗು ಸೇರಿದಂತೆ ಸಂಘದ ಪದಾಧಿಕಾರಿಗಳು, ಗ್ರಾಮಸ್ಥರು ಸೇರಿದಂತೆ ಮಹಿಳೆ ಸಂಘದವರು ಹಾಜರಿದ್ದರು.
