ಚಾಮರಾಜನಗರ: ತಾಲ್ಲೂಕಿನ ಮುತ್ತಿಗೆ ಗ್ರಾಮದಲ್ಲಿ ಗ್ರಾಮದ ಬಿ.ಆರ್. ಅಂಬೇಡ್ಕರ್ ಯುವಕಸಂಘದಿಂದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ನೇ ಜಯಂತಿ ಅಂಗವಾಗಿ ವಿಜೃಂಭಣೆಯ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಯಿತು.
ಗ್ರಾಮದ ಅಂಬೇಡ್ಕರ್ ಸಮುದಾಯಭವನದ ಆವರಣದಲ್ಲಿ ಯುಕಸಂಘದ ಪದಾಧಿಕಾರಿಗಳು ಕೇಕ್ ಕತ್ತರಿಸುವ ಮೂಲಕ ಬಾಬಾಸಾಹೇಬ್ ಅವರ ಸ್ಮರಣೆ ಮಾಡಿದರು.
ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಅವರ ಭಾವಚಿತ್ರದ ಮೆರವಣಿಗೆ ಜರುಗಿತು.
ಗ್ರಾಮದ ಮನೆಗಳ ಮುಂದೆ ರಂಗೋಲಿ ಚಿತ್ತಾರ, ತಳಿರುತೋರಣ ಆಕರ್ಷಣೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆಗೆ ಮೆರುಗು ನೀಡಿತು.
ಮೆರವಣಿಗೆಯಲ್ಲಿ ಗ್ರಾಮಸ್ಥರು, ಯುವಕಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.