ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಡಾಕ್ಟರ್ ಬಾಬಾಸಾಹೇಬ್ ಅಂಬೇಡ್ಕರ್ ರವರ 131 ನೇ ಜನ್ಮ ಜಯಂತಿಯನ್ನು ಆಚರಿಸಲಾಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ ವಿಶ್ವದ ಎಲ್ಲಾ ದೇಶಗಳ ವಿಷಯವನ್ನು ಆಯ್ದುಕೊಂಡು ಉತ್ತಮ ಸಂವಿಧಾನ ರಚನೆ ಮಾಡಿದ್ದಾರೆ.ಶಿಕ್ಷಣ, ಉದ್ಯೋಗ, ಚುನಾವಣೆಯಲ್ಲಿ ಮೀಸಲಾತಿ ಕಲ್ಪಿಸಿಕೊಟ್ಟರು ಸಮಾಜದಲ್ಲಿ ತುಳಿತಕ್ಕೊಳಗಾದ ಜನರಿಗೆ ಸಾಮಾಜಿಕ ನ್ಯಾಯವನ್ನು ಕಲ್ಪಿಸಿಕೊಟ್ಟ ಮಹಾನ್ ವ್ಯಕ್ತಿ ಡಾ ಅಂಬೇಡ್ಕರ್ ರವರು ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೌಮ್ಯ ಮಾತನಾಡಿ ಸಮಾಜದಲ್ಲಿ ಅಂಬೇಡ್ಕರ್ ಅವರು ಅಸ್ಪೃಶ್ಯತೆ ಅಸಮಾನತೆಯನ್ನು ಹೋಗಲಾಡಿಸಲು ಅನೇಕ ಹೋರಾಟಗಳನ್ನು ಮಾಡಿದ ಮಹಾನ್ ವ್ಯಕ್ತಿ ಸಂವಿಧಾನದ ಎಲ್ಲಾ ವಿಚಾರಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷೆ ಸೌಮ್ಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ , ಸದಸ್ಯರಾದ ಶಂಕರ್, ಗಿರಿಗೌಡ’ ಇಮ್ರಾನ್ ,ವೀಣಾ , ಕರವಸೂಲಿಗಾರ ಅಣ್ಣೇಗೌಡ ಸಿಬ್ಬಂದಿಗಳಾದ ದೀಪು, ಮೋಹನ್, ಸುಬ್ರಹ್ಮಣ್ಯ , ಮುಖಂಡರಾದ ಮಲ್ಲೇಶ್ , ಚಂದ್ರು, ದೊರೆಸ್ವಾಮಿ, ಚಂದ್ರಹಾಸ ‘ಹಾಜರಿದ್ದರು.