ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ರವರು ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ಜನತೆಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್ ಸೇವೆಯನ್ನು ಕೊಡುಗೆಯಾಗಿ ನೀಡಿದರು.
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಶಾಸಕರಾದ ಆರ್. ನರೇಂದ್ರ ರವರು ಮಾಜಿ ಸಂಸದರು ನೀಡಿದ ಆಂಬುಲೆನ್ಸ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್. ಜಯಣ್ಣ, ಎಸ್. ಬಾಲರಾಜ್, ಎ.ಆರ್. ಕೃಷ್ಣಮೂರ್ತಿ, ಕೊಳ್ಳೇಗಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ತೋಟೇಶ್, ನಗರ ಸಭೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು.