ಮೈಸೂರು, ಮಾರ್ಚ್ 02 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬಿಳಿಗೆರೆ ಹೋಬಳಿಯ ಅಂಗನವಾಡಿಯಲ್ಲಿ ಖಾಲಿಯಿರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ  13 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.ಹುದ್ದೆಗಳಿಗೆ ಅರ್ಜಿಯನ್ನು 2022 ಮಾರ್ಚ್ 22 ರವರೆಗೆ https://anganwadirecruit.kar.nic.in/ ವೆಬ್ಸೈಟ್ ಮೂಲಕ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಬಿಳಿಗೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.