ಚಾಮರಾಜನಗರ: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ತಾಲೂಕಿನ ಮರಿಯಾಲ, ಮರಿಯಾಲಹುಂಡಿ ಗ್ರಾಮದಲ್ಲಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ‘ರೈತ ಕುಟುಂಬದ ಹಿನ್ನಲೆಯಲ್ಲಿ ಬಂದವನಾಗಿದ್ದು, ರೈತರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ.
ಅವರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನಾನು ಬದ್ದನಾಗಿದ್ದೇನೆ. ರೈತ ಮುಖಂಡರು ಈ ಬಾರಿಯ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಜಿಪಂ ಮಾಜಿ ಸದಸ್ಯ ಶಿವರುದ್ರಪ್ಪ, ಎಸ್‌ಟಿ,ಮೋರ್ಚಾ ರಾಜ್ಯ ಪ್ರಧಾನಕಾರ್ಯದರ್ಶಿ ಪು.ಶ್ರೀನಿವಾಸನಾಯಕ, ಜಿ,ಪಂ ಮಾಜಿ ಅಧ್ಯಕ್ಷ ಸಿ.ಎ ಮಹದೇವಶೆಟ್ಟಿ, ದಳಪತಿ ವೀರತಪ್ಪ, ಗ್ರಾಪಂ ಸದಸ್ಯರಾದ ಡಿ, ಮಂಜು, ಚಂದ್ರು, ಮಂಜು, ಮಹೇಶ್ ಕುದರ್, ಕೆಲ್ಲಂಬಳ್ಳಿ ಸೋಮಶೇಖರ್, ಕುಮಾರ್, ಗ್ರಾಪಂ ಮಾಜಿ ಸದಸ್ಯ ಶಿವಶಂಕರ್, ನಾಗರಾಜು, ಗುರುಪ್ರಸಾದ್, ಸ್ವಾಮಿ, ಗಿರೀಶ್, ಮುತ್ತಿಗೆದೊರೆ, ನಟರಾಜು, ಸೇರಿದಂತೆ ಇತರರು ಹಾಜರಿದ್ದರು.
