ಚಾಮರಾಜನಗರ,ಏ೭: ಚಾಮರಾಜನಗರ ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆ ನಿರ್ದೇಶಕ ಸ್ಥಾನಕ್ಕಾಗಿ ಸ್ಪರ್ಧಿಸಿರುವ ಬದನಗುಪ್ಪೆ ಕ್ಷೇತ್ರದ ಅಭ್ಯರ್ಥಿ ಎಂ.ಬಿ.ಗುರುಸ್ವಾಮಿ ಅವರ ಪರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಬೋಗಾಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರ ಜೊತೆಗೂಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಏ.೧೭ ರಂದು ನಡೆಯಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಎಂ.ಬಿ.ಗುರುಸ್ವಾಮಿ ರೈತರಾಗಿದ್ದು, ರೈತರ ಕಷ್ಟಕಾರ್ಪಣ್ಯಗಳನ್ನು ಬಲ್ಲವರಾಗಿದ್ದಾರೆ ಅವರನ್ನು ಹೆಚ್ಚು ಮತಗಳನ್ನು ನೀಡಿ ಗೆಲ್ಲಿಸುವಂತೆ ರೈತ ಮುಖಂಡರಲ್ಲಿ ಮನವಿ ಮಾಡಿದರು.
ನಾನು ಸಹ ರೈತ ಕುಟುಂಬದ ಹಿನ್ನಲೆಯಲ್ಲಿ ಬಂದವನಾಗಿದ್ದು ಶಾಸಕನಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರು ಸೇರಿದಂತೆ ಎಲ್ಲಾ ವರ್ಗಗಳ ಪರವಾಗಿ ಸಾಮಾಜಿಕ ನ್ಯಾಯದಡಿ ಅಭಿವೃದ್ದಿ ಕೆಲಸ ಮಾಡಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ರೈತ ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಸಿ.ಎ ಮಹದೇವಶೆಟ್ಟಿ, ತಾ.ಪಂ ಮಾಜಿ ಸದಸ್ಯ ಮಹಾಲಿಂಗಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಡಿ.ನಾಗೇಂದ್ರ, ಮಹೇಶ್ ಕುದರ್, ದೊರೆಮುತ್ತಿಗೆ, ನಟರಾಜು ಮಂಜು, ಮಧು ಆಚಾರ್, ದಳಪತಿವೀರತಪ್ಪ, ಮಹೇಶ್, ಮಂಜು, ರಾಮಚಂದ್ರಯ್ಯ ಶ್ರೀಧರ್,ದೊರೆಸ್ವಾಮಿ, ಜಯಶಂಕರ್, ಗುರುಲಿಂಗಯ್ಯ ಸೇರಿದಂತೆ ಇತರರು ಹಾಜರಿದ್ದರು.