ಬೆಂಗಳೂರು: ಕನ್ನಡಿಗರ ಕಣ್ಮಣಿ, ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ‘ಅಪ್ಪು’ ರಾಜಕುಮಾರ್ ಮತ್ತೆ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದ್ದಾರೆ. ಅಪ್ಪು ಅಭಿನಯದ ಕೊನೆಯ ಚಿತ್ರದ ಪೋಸ್ಟರ್ ಇಂದು ರಿಲೀಸ್ ಆಗಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ‘ಜೇಮ್ಸ್’ ರಿಲೀಸ್ ಆಗಲಿದೆ. ಇದೀಗ ಕನ್ನಡ ಹಾಗೂ ಇಂಗ್ಲಿಷ್ ಪೋಸ್ಟರ್ ನ್ನು ಜೇಮ್ಸ್ ಚಿತ್ರತಂಡ ರಿಲೀಸ್ ಮಾಡಿದೆ. ಅಪ್ಪು ಕಮಾಂಡೋ ಲುಕ್ ನಲ್ಲಿ ಮಿಂಚ್ಚಿದ್ದು. ಪುನೀತ್ ನಾಯಕನಾಗಿ ಅಭಿನಯಿಸಿದ ಕೊನೆಯ ಚಿತ್ರ ಜೇಮ್ಸ್ ಬಗ್ಗೆ ಬಹಳಷ್ಟು ನಿರೀಕ್ಷೆಗಳಿವೆ. ಇದೀಗ ರಿಲೀಸ್ ಆಗಿರುವ ಜೇಮ್ಸ್ ಚಿತ್ರದ ಪೋಸ್ಟರ್ ಆ ಎಲ್ಲಾ ನಿರೀಕ್ಷೆಗಳನ್ನು ಮತ್ತಷ್ಟು ಹೆಚ್ಚಿಸಿದೆ.

ಅಭಿಮಾನಿಗಳ ಕಂಬನಿ:

‘ಜೇಮ್ಸ್’ ಚಿತ್ರದ ಪೋಸ್ಟರ್ ರಿಲೀಸ್ ಆಗಿರುವುದು ಒಂದೆಡೆ ಸಂಭ್ರಮದ ವಾತಾವರಣ ಸೃಷ್ಟಿಸಿದ್ದರೆ, ಮತ್ತೊಂದೆಡೆ ಅಪ್ಪು ಅವರನ್ನು ನೆನೆದು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ‘ಅಪ್ಪು ನೀವು ನಮ್ಮೊಂದಿಗೆ ಇರಬೇಕಿತ್ತು’ ಎಂದು ಅಭಿಮಾನಿಗಳು ಭಾವುಕರಾಗಿ ಪೋಸ್ಟ್ ಹಾಕುತ್ತಿದ್ದಾರೆ. ಅಪ್ಪು ಲುಕ್ ಹಾಗೂ ಚಿತ್ರ ತಂಡದ ಪರಿಶ್ರಮಕ್ಕೆ ಫ್ಯಾನ್ಸ್ ೧೦೦ ಮಾರ್ಕ್ಸ್ ಕೊಟ್ಟಿದ್ದಾರೆ.
ಪರಭಾಷೆಯಲ್ಲೂ ಹವಾ..!

ನಟ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಗೆ ಇಡೀ ದೇಶವೇ ಕಂಬನಿ ಮಿಡಿದಿತ್ತು. ಅಭಿಮಾನಿಗಳ ಪಾಲಿನ ಪ್ರೀತಿಯ ಅಪ್ಪುಗೆ ದೇಶಾದ್ಯಂತ ಕೋಟಿ ಕೋಟಿ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದ್ದರು. ಅಪ್ಪು ಅಭಿನಯದ ಕೊನೇ ಚಿತ್ರ ಜೇಮ್ಸ್ ಗಾಗಿ ಕಾತುರದಿಂದ ಫ್ಯಾನ್ಸ್ ಕಾಯುತ್ತಿದ್ದಾರೆ. ಹೀಗಾಗಿ ಗಣರಾಜ್ಯೋತ್ಸವದ ದಿನದಂದು ಜೇಮ್ಸ್ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಪರಭಾಷೆಯಲ್ಲೂ ಅಪ್ಪು ಚಿತ್ರ ಹವಾ ಎಬ್ಬಿಸೋದು ಪಕ್ಕಾ ಆಗಿದೆ. ಕರ್ನಾಟಕ ಮಾತ್ರವಲ್ಲದೆ ನೆರೆ ರಾಜ್ಯಗಳಲ್ಲೂ ಅಭಿಮಾನಿಗಳು ಅಪ್ಪು ಅಭಿನಯದ ಜೇಮ್ಸ್ ಚಿತ್ರದ ಪೋಸ್ಟರ್ ಗೆ ಫಿದಾ ಆಗಿದ್ದಾರೆ. ನಿಮ್ಮ ಅಗಲಿಕೆಗೆ ಸಿನಿಮಾ ಇಂಡಸ್ಟ್ರಿಯೇ ಇಲ್ಲ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯದಲ್ಲಿ ಅಭಿಮಾನಿಗಳು ಕಂಬಿನಿ ಹಿಡಿದಿದ್ದು. ಅಪ್ಪು ವಿ ಮಿಸ್ ಯೂ.ಅಂತಿದ್ದಾರೆ.

ಹುಟ್ಟುಹಬ್ಬಕ್ಕೆ ಜೇಮ್ಸ್ ಗಿಫ್ಟ್.

ಪುನೀತ್ ರಾಜ್ ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಮಾರ್ಚ್ ೧೭ರಂದು ಜೇಮ್ಸ್ ಚಿತ್ರ ತೆರೆಗೆ ಬರುವ ನಿರೀಕ್ಷೆ ಇದೆ. ಪುನೀತ್ ರಾಜ್ ಕುಮಾರ್ ನಿಧನದ ನಂತರ ಜೇಮ್ಸ್ ಚಿತ್ರ ಅರ್ಧಕ್ಕೆ ನಿಂತಿತ್ತು. ಹೀಗಾಗಿ ಚಿತ್ರತಂಡ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿತ್ತು. ಇಂದು ಪೋಸ್ಟರ್ ರಿಲೀಸ್ ಮಾಡಿದ್ದು, ಇನ್ನೆರಡು ತಿಂಗಳಲ್ಲಿ ತೆರೆ ಮೇಲೆ ಜೇಮ್ಸ್ ಅಬ್ಬರ ಶುರುವಾಗುವ ನಿರೀಕ್ಷೆ ಇದೆ.