ಮೈಸೂರು, ಜುಲೈ. 23. ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ಬಾಲ್ಯ ವಿವಾಹಗಳ ಪ್ರಕರಣಗಳು ಹೆಚ್ಚಾಗಿರುವ ಕಾರಣ ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾದ ಶ್ಯಾಮಲಾ ಎಸ್.ಕುಂದರ್ ಅವರು ಹೇಳಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿ, ಬಾಲ್ಯ ವಿವಾಹಗಳು ಎಲ್ಲೆಲ್ಲಿ ಹೆಚ್ಚಾಗಿ ಕಂಡುಬರುತ್ತದೆಯೋ ಅಲ್ಲಿ ಬಾಲ್ಯವಿವಾಹಗಳ ಬಗ್ಗೆ ಅರಿವು ಮೂಡಿಸಬೇಕು. ಈ ಕೆಲಸವು ಗ್ರಾಮ ಪಂಚಾಯಿತಿಗಳ ಮಟ್ಟದಿಂದ ನಡೆಯಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಸ್ವ-ಸಹಾಯ ಸಂಘಗಳ ಮೂಲಕ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಅರಿವು ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಆದಷ್ಟು ಬೇಗ ಸಖಿ ಕೇಂದ್ರವನ್ನು ಸ್ಥಾಪಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.

ಹೆಣ್ಣು ಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ, ಅವರ ಆತ್ಮರಕ್ಷಣೆಗಾಗಿ ಪೆÇಲೀಸ್ ಇಲಾಖೆಯ ವತಿಯಿಂದ ತರಬೇತಿ ನೀಡುವ ಕೆಲಸವಾಗಬೇಕು. ಕೆಲಸಕ್ಕಾಗಿ ವಲಸೆ ಕಾರ್ಮಿಕರನ್ನು ಕರೆಸಿಕೊಳ್ಳುವವರು ಅವರಿರುವ ಸ್ಥಳದಲ್ಲೇ ಶೌಚಾಲಯ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳು ಸಿಗುವಂತೆ ನೋಡಿಕೊಳ್ಳಬೇಕು ಎಂದರು.

ಕೌಟುಂಬಿಕ ಕಲಹಗಳ ಕುರಿತು ದೂರು ನೀಡಲು ಬಂದರೆ ಸ್ವೀಕರಿಸಬೇಕು. ಅಗತ್ಯವಿದ್ದರೆ ಅವರ ಸಲಹೆಯಂತೆ ಕೌನ್ಸಲಿಂಗ್ ಕೊಡಬೇಕು. ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ದಕ್ಷಿಣ ಭಾರತದ ರಾಜ್ಯದ ಮಹಿಳೆಯರ ಮೇಲಿನ ಪ್ರಕರಣಗಳು ಕಡಿಮೆ ಇದೆ. ಕರ್ನಾಟಕದಲ್ಲಿ ಮನೆ ಮನೆಯಿಂದಲೂ ಉತ್ತೇಜನ ಸಿಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಆರ್. ಚೇತನ್, ಡಿಸಿಪಿ ಗೀತಾ ಪ್ರಸನ್ನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮಿ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

By admin