ಕೆ.ಆರ್.ಪೇಟೆ: ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ ಗ್ಯಾಸ್ ತಮ್ಮಯ್ಯ ಅವರ ಪುತ್ರ ಮನು(22) ಮೃತಪಟ್ಟ ದುರ್ದೈವಿ. ಈತ ತನ್ನ ಬೈಕಿನಲ್ಲಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿ ಬರುತ್ತಿದ್ದಾಗ ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದನು. ಪರಿಣಾಮ ಗಂಭೀರವಾದ ಗಾಯಗಳಾಗಿತ್ತು. ಕೂಡಲೇ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತ ಮನು ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

By admin