ಗುಂಡ್ಲುಪೇಟೆ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ವಿಭಾಗದ ಗುಂಡ್ಲುಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಮಂಜಪ್ಪ ನೇಮಕವಾಗಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅನುಮೋದನೆ ಮೇರೆಗೆ ಬಿ.ಎಂ.ಮಂಜಪ್ಪ ಅವರನ್ನು ನೇಮಕ ಮಾಡಿ ಆದೇಶ ಪತ್ರ ಹೊರಡಿಸಿದ್ದು, ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮಾರ್ಗದರ್ಶನ, ಜಿಲ್ಲಾ/ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ, ವಾಟ್ಸ್ ಅಪ್, ಪೇಸ್ ಬುಕ್, ಟ್ವಿಟರ್, ಕ್ಲಬ್ ಹೌಸ್ ಇತ್ಯಾದಿ ಸಾಮಾಜಿಕ ಜಾಲತಾಣಗಳ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.
ವರದಿ: ಬಸವರಾಜು ಎಸ್.ಹಂಗಳ