ಗುಂಡ್ಲುಪೇಟೆ: ಗುಜರಾತ್, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಗೋವಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ಘಟನೆಗೆ ಕೋಮು ಪ್ರಚೋದನೆ ನೀಡಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿ ತಾಲೂಕು ಪಿ.ಎಫ್.ಐ ಸಂಘಟನೆ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಪಟ್ಟಣದ ಟಿಪ್ಪು ಸರ್ಕಲ್‍ನಿಂದ ಜಾಥಾ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಕೋಮು ಪ್ರಚೋದನೆ ನೀಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ತಾಲೂಕು ಕಚೇರಿ ಮುಂದೆ ಜಮಾಯಿಸಿದರು.
ಈ ಸಂದರ್ಭದಲ್ಲಿ ಪಿಎಫ್‍ಐ ತಾಲೂಕು ಅಧ್ಯಕ್ಷ ಇಮ್ರಾನ್ ಖಾನ್ ಮಾತನಾಡಿ, ಕೆಲವು ಸಂಘಟನೆಗ¼ ಧಾರ್ಮಿಕ ಸಮಾರಂಭಗಳನ್ನು ಹಿಂಸಾತ್ಮಕವಾಗಿ ಪರಿವರ್ತಿಸಲು ಪ್ರಯತ್ನ ನಡೆಸಿದಂತೆ ತೋಚುತ್ತಿದೆ. ದೇಶದಲ್ಲಿ ನೂರಾರು ವಿವಿಧ ಬಗೆಯ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಹಬ್ಬಗಳು ನಡೆಯುತ್ತಿದ್ದು, ಎಂದಿನಂತೆ ಶಾಂತಿಯುತವಾಗಿ ಮುಕ್ತಾಯಗೊಳ್ಳುತ್ತವೆ. ಸಾಂಪ್ರದಾಯಿಕವಾಗಿ ಇಂತಹ ಘಟನೆಗಳನ್ನು ಸಮುದಾಯಗಳ ನಡುವೆ ಸಾಮರಸ್ಯ ಮತ್ತು ಸೌಹಾರ್ದತೆಯನ್ನು ಬಲಪಡಿಸುತ್ತಿದ್ದರವು. ಆದರೆ ಇದಕ್ಕೆ ಕೇವಲ ಬೆರಳೆಣಿಕೆ ಮಂದಿ ಕೋಮು ಬಣ್ಣ ಬಳಿಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು.
ರಾಮ ನವಮಿ ಆಚರಣೆ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ವ್ಯಾಪಕ ಪ್ರಚೋದನೆ, ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳನ್ನು ಪಿತೂರಿಯಿಂದ ನಡೆಸಲಾಗಿದೆ. ದ್ವೇಷ ಪ್ರಚೋದಕರು ಹಾಗೂ ಸಾಮರಸ್ಯದ ಕದಡುವವರನ್ನು ನಿಯಂತ್ರಿಸಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಸಂಘರ್ಷಕ್ಕೆ ಕಾರಣಕ್ಕೆ ಕಾರಣವಾಗುವ ಸನ್ನಿವೇಶವನ್ನು ತಡೆಯಲು ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
ಈ ಪಿಎಫ್‍ಐ ಸಂಘಟನೆ ಕಾರ್ಯಕರ್ತರಾದ ಸರ್ಫರಾಜ್, ಹಹಮತ್, ಮಾನವ ಬಂಧುತ್ವ ವೇದಿಕೆ ಜಿಲ್ಲಾ ಸಂಚಾಲಕ ಸುಭಾಷ್ ಮಾಡ್ರಹಳ್ಳಿ, ಗಿರೀಶ್ ಲಕ್ಕೂರು ಸೇರಿದಂತೆ ಇತರರು ಇದ್ದರು.
ವರದಿ: ಬಸವರಾಜು ಎಸ್.ಹಂಗಳ