Category: ಚಾಮರಾಜನಗರ

ವಿವಿಧ ಗ್ರಾಮಗಳಲ್ಲಿ ವಾತ್ಸಲ್ಯ ಕಿಟ್ ವಿತರಣೆ

ಚಾಮರಾಜನಗರ: ತಾಲೂಕಿನ ಮಸಗಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೃದ್ಧರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ತಾಲೂಕಿನ ಮಸಗಾಪುರ ಗ್ರಾಮದ ಜಯಕಾಂತಿ ಎಂಬವರಿಗೆ ಸಂಸ್ಥೆಯ ಜಿಲ್ಲಾ ಯೋಜನಾ ನಿರ್ದೇಶಕಿ ಲೀಲಾವತಿ ಅಡುಗೆ ಪಾತ್ರೆಗಳು, ಚಾಪೆ, ಕಂಬಳಿ, ದಿಂಬು, ಬುಟ್ಟಿ ಸೇರಿದಂತೆ…

ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣಿಸದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಅಧಿಕಾರಿಗಳು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿ ಕೋವಿಡ್-೧೯ ಸಂಬಂಧ ಜಿಲ್ಲಾಡಳಿತ…

ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ (ಕರಾಟೆ, ಜುಡೋ, ಟೈಕ್ವಾಂಡೋ) ಕಾರ್ಯಕ್ರಮವನ್ನು ನಗರದ ವೃತ್ತಿಪರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.ವಿದ್ಯಾರ್ಥಿನಿಯರಿಗೆ ಸ್ವಯಂ…

ಕೋವಿಡ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ,

ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ ಮೈಮರೆಯುವಂತಿಲ್ಲ. ಸೋಂಕು ಹೆಚ್ಚಾಗದಂತೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗಡಿಭಾಗದಲ್ಲಿ ತಪಾಸಣೆ ಬಿಗಿಗೊಳಿಸಬೇಕು ಎಂದು ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು. ಕೋವಿಡ್-19 ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ…

ಗೌಡಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯ : ಹೆಚ್ಚುವರಿ ಜಿಲ್ಲಾಧಿಕಾರಿಯವರಿಂದ ಸಾರ್ವಜನಿಕ ಕುಂದುಕೊರತೆಗಳ ಆಲಿಕೆ

ಚಾಮರಾಜನಗರ: ಯಳಂದೂರು ತಾಲೂಕಿನ ಅಗರ ಹೋಬಳಿಯ ಗೌಡಳ್ಳಿ ಗ್ರಾಮದಲ್ಲಿಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ ಅವರು ಗ್ರಾಮವಾಸ್ತವ್ಯ ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿದರು. ಗೌಡಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯ ಅವರಣದಲ್ಲಿಂದು ?ಜಿಲ್ಲಾಧಿಕಾರಿಗಳ ನಡೆ-ಗ್ರಾಮದ ಕಡೆಗೆ? ಕಾರ್ಯಕ್ರಮದಡಿಯಲ್ಲಿ…

ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ವ್ಯವಸ್ಥೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಕೋವಿಡ್ ಪ್ರಕರಣಗಳು ಹೆಚ್ಚು ಕಂಡು ಬಂದಿರುವ ಕಂಟೈನ್‌ಮೆಂಟ್ ಪ್ರದೇಶಗಳಲ್ಲಿ ವಿಶೇಷ ಕಣ್ಗಾವಲು ವ್ಯವಸ್ಥೆ ಕೈಗೊಂಡು ಪ್ರಕರಣಗಳು ಉಲ್ಬಣಿಸದಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-೧೯ ನಿಯಂತ್ರಣ ಸಂಬಂಧ ನಡೆದ…

ಹರದನಹಳ್ಳಿ ಪಿಎಸಿಸಿ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಂದ ಶಾಸಕರಿಗೆ ಅಭಿನಂದನೆ

ಚಾಮರಾಜನಗರ: ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿಪತ್ತಿನಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಚ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ವೆಂಕಟೇಶ್, ಉಪಾಧ್ಯಕ್ಷ ಬಂಗಾರಶೆಟ್ಟಿ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರನ್ನು ನಗರದ ನಿವಾಸದಲ್ಲಿ ಭೇಟಿಮಾಡಿ ಅಭಿನಂದಿಸಿದರು.ಇದೇವೇಳೆ ತಾ,ಪಂ.ಮಾಜಿ ಸದಸ್ಯ ಹೆಚ್,ಎಂ,ಮಹದೇವಶೆಟ್ಟಿ ನೇತೃತ್ವದಲ್ಲಿ ಸಂಘದ ಅಧ್ಯಕ್ಷ.…

ಭಗತ್‌ಸಿಂಗ್ ಯುವಸೇನೆ ವತಿಯಿಂದ ಕ್ಯಾಲೆಂಡರ್ ಬಿಡುಗಡೆ

ಚಾಮರಾಜನಗರ: ತಾಲ್ಲೂಕಿನ ಕೋಡಿಮೋಳೆ ಗ್ರಾಮದ ಭಗತ್ ಸಿಂಗ್ ಯುವಸೇನೆ ವತಿಯಿಂದ ನೂತನವಾಗಿ ಹೊರತರಲಾಗಿರುವ ೨೦೨೨ರ ಕ್ಯಾಲೆಂಡರ್‌ನ್ನು ಡಿವೈಎಸ್ಪಿ ಪ್ರಿಯದರ್ಶಿನಿಸಾಣೆಕೊಪ್ಪ ಅವರು ಬಿಡುಗಡೆಗೊಳಿಸಿದರು.ನಂತರ ಮಾತನಾಡಿ, ಭಗತ್ ಸಿಂಗ್ ಸಂಘಟನೆಯ ಕಾರ್ಯಕರ್ತರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು, ಅಸಹಾಯಕರ ನೆರವಿಗೆ ಬರಬೇಕು, ಜನರಲ್ಲಿ ನೈತಿಕಮೌಲ್ಯಗಳನ್ನು ತುಂಬುವ…

ವಿಕಲಚೇತನರಿಗೆ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ

ಚಾಮರಾಜನಗರ: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ನಿಗದಿತ ಅನುದಾನವನ್ನು ಸದ್ಭಳಕೆ ಮಾಡಿ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆ.ಡಿ.ಪಿ. ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಅಂಗವಿಕಲ ಕುಂದುಕೊರತೆ…

ಕುಮಚಹಳ್ಳಿಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಕಾನೂನು ಅರಿವು

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ|| ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರೆಡ್‌ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ತಾಲೂಕಿನ ಹರವೆ ಹೋಬಳಿಯ ಕುಮಚಹಳ್ಳಿ ಗ್ರಾಮದ ಸರ್ಕಾರಿ…

ಸರಳವಾಗಿ ರಾಷ್ಠ್ರೀಯ ಮತದಾರ ದಿನ ಆಚರಣೆ : ಎಸ್. ಕಾತ್ಯಾಯಿನಿದೇವಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ|| ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ರೆಡ್‌ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ತಾಲೂಕಿನ ಹರವೆ ಹೋಬಳಿಯ ಕುಮಚಹಳ್ಳಿ ಗ್ರಾಮದ ಸರ್ಕಾರಿ…

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ : ಜಿಲ್ಲಾಧಿಕಾರಿ ಚಾರುಲತಾ ಸೋಮಲ್

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಎಲ್ಲರ ಸಹಕಾರದೊಂದಿಗೆ ಗಣರಾಜ್ಯೋತ್ಸವವನ್ನು ಜನವರಿ ೨೬ರಂದು ಸರ್ಕಾರದ ನಿರ್ದೇಶನ ಅನುಸಾರ ಕೋವಿಡ್ ಮಾರ್ಗಸೂಚಿ ಪಾಲನೆಯೊಂದಿಗೆ ಅರ್ಥ ಪೂರ್ಣವಾಗಿ ಆಚರಿಸಲು ನಿರ್ಧಾರ ಕೈಗೊಳ್ಳಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ…

ರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ,

೧೯೭೫ರಲ್ಲಿ ಶ್ರೀ ವಿ.ಹೆಚ್.ಗೌಡ ಕ.ಸಾ.ಪ ಜಿಲ್ಲಾಧ್ಯಕ್ಷರಾಗಿದ್ದು, ಮೈಸೂರು ಟೌನ್‌ಹಾಲ್‌ನಲ್ಲಿಡಾ.ಹಾ.ಮಾ.ನಾಯಕ್ ಉದ್ಘ್ಹಾಟಿಸಿ, ಪ್ರೊ||ಸಿ.ಪಿ.ಕೆ. ಅಧ್ಯಕ್ಷತೆ ವಹಿಸಿದ್ದರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿಯಲ್ಲಿ ದ್ವಿತೀಯ ಬಹುಮಾನ ಪಡೆದ ಕವಿತೆ.ಸ್ಥಳದಲ್ಲೇ ಗಾನಕೋಗಿಲೆ ಪಿ.ಕಾಳಿಂಗರಾಯರ ಪುತ್ರ ಪ್ರದೀಪ್ ಇದನ್ನು ಸುಗಮ ಸಂಗೀತದ ಮೂಲಕ ಹಾಡಿ ರಂಜಿಸಿದರು! ಚಿತ್ರನಟ ಸಂಪತ್‌ಪುತ್ರ ಮುಕುಂದ್,…

ಕೋವಿಡ್ ಕೇರ್ ಸೆಂಟರ್ : ಜಿಲ್ಲಾಧಿಕಾರಿ ಆದೇಶ

ವಿವಿಧೆಡೆ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭ: ಸಾರ್ವಜನಿಕ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಸೋಂಕಿತರು ಹಾಗೂ ಅವರ ಅವಲಂಬಿತರಿಗೆ ನೆರವು ಪಡೆಯಲು ಜಿಲ್ಲಾದ್ಯಂತ ಕಂಟ್ರೋಲ್ ರೂಂ, ಸಹಾಯವಾಣಿಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಕೋವಿಡ್ ಕಂಟ್ರೋಲ್ ರೂಂ…

ಸಂಕ್ರಾಂತಿ : ಜಾತ್ರೆ, ಧಾರ್ಮಿಕ ಸಭೆ ಸಮಾರಂಭ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ: ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ಹಿತದೃಷ್ಠಿಯಿಂದ ಕೋವಿಡ್-೧೯ರ ಒಮಿಕ್ರಾನ್ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕೋವಿಡ್-೧೯ ರೆಗ್ಯುಲೇಷನ್ಸ್ ೨೦೨೦ ಸೆಕ್ಷನ್ ೧೨(೩) ರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ…