Category: ಮೈಸೂರು ನ್ಯೂಸ್

ಕೇಂದ್ರದಿಂದ ರಸಗೊಬ್ಬರ ಮೇಲಿನ ಸಬ್ಸಿಡಿ ಹೆಚ್ಚಳ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ಡಿಎಪಿ ಹಾಗೂ ಪಿ & ಕೆ ರಸಗೊಬ್ಬರ ಸಬ್ಸಿಡಿಯನ್ನು 50-ಕೆ.ಜಿ. ಚೀಲವೊಂದಕ್ಕೆ 511 ರೂಪಾಯಿಯಿಂದ 1,211 ರೂಪಾಯಿಗೆ (ಶೇ. 140) ಹೆಚ್ಚಳ ಮಾಡಿ ಕೇಂದ್ರ ರಸಗೊಬ್ಬರ ಇಲಾಖೆಯು ಅಧಿಕೃತ ಆದೇಶ ಹೊರಡಿಸಿದೆ. ಪೋಷಕಾಂಶ ಆಧಾರಿತ ರಸಗೊಬ್ಬರ ಸಬ್ಸಿಡಿ…

ಕೊರೋನಾ ವಾರಿಯರ್ಸ್ ಗಳಿಗೆ ಬಾಳೆಗೊನೆ ವಿತರಣೆ

ಕೆ.ಆರ್.ಪೇಟೆ: ಕೊರೋನಾ ಸಂಕಷ್ಟದಲ್ಲಿ ಸಮಯದಲ್ಲಿ ಸಂಘ ಸಂಸ್ಥೆಗಳು ಸೇರಿದಂತೆ ಹಲವು ಸಂಘಟನೆಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದು ಅದರಂತೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ತಾಲೂಕಿನ ಬಾಳೆ ಬೆಳೆಯುವ ರೈತರಿಂದ ನೇರವಾಗಿ ಬಾಳೆಹಣ್ಣನ್ನು ಖರೀದಿಸಿ ಗೊನೆ ಸಹಿತ ಕೊರೋನಾ ವಾರಿಯರ್ಸ್ ಗಳಿಗೆ ಹಂಚುವ…

ಕರೋನ ಸಂಕಷ್ಟದಲ್ಲಿ ವಿವಿಧ ರೀತಿಯ ಸೇವೆ ಸಲ್ಲಿಸುತ್ತಿರುವ ಬ್ರಹ್ಮಶ್ರೀ ಯೋಗ ಮಂದಿರ

ಮೈಸೂರು 21. ಕೊರೋನಾ ಎರಡನೇ ಅಲೆ ಮಹಾಮಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಲಾಕ್ ಡೌನ್ ಸಂಕಷ್ಟದಲ್ಲಿರುವ 36ಕ್ಕೂ ಹೆಚ್ಚು ಕುಟುಂಬಗಳಿಗೆ ದಿನಸಿ ತಲುಪಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದೆ ಬ್ರಹ್ಮಶ್ರೀ ಯೋಗಮಂದಿರದ ವಿದ್ಯಾರ್ಥಿಗಳು. ಬ್ರಹ್ಮಶ್ರೀ ನಾರಾಯಣಗುರು ಯೋಗ ಮಂದಿರವು ಮೂವತ್ತು ವರ್ಷಗಳಿಂದ ಯೋಗಾಸನ…

ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಕೊಲೆ

ಚಾಮರಾಜನಗರ: ವ್ಯಕ್ತಿಯೊಬ್ಬ ತನ್ನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಕೊಂದು ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ನಡೆದಿದೆ. ಭೀಮನಬೀಡು ಗ್ರಾಮದ ಬಸವಶೆಟ್ಟಿ ಎಂಬಾತನೇ ಅನೈತಿಕ ಸಂಬಂಧದಿಂದ ಸಾವನ್ನಪ್ಪಿದ ದುರ್ದೈವಿ. ಈತ ಅದೇ ಗ್ರಾಮದ ಶಿವಣ್ಣ…

ಖಾಸಗಿ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಗೆ ಸಿಎಂಗೆ ಮನವಿ

ಬೆಂಗಳೂರು: ಕೋವಿಡ್ ಕಾರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಅನುದಾನ ರಹಿತ ಶಿಕ್ಷಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆಗೆ ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿರುವ ಅವರು, ಸರ್ಕಾರ ವಿಧಿಸಿದ ಲಾಕ್ ಡೌನ್ ರಾಜ್ಯಾದ್ಯಂತ…

ಕೆ.ಆರ್.ಪೇಟೆ: ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್

ಕೆ.ಆರ್.ಪೇಟೆ: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶಕ್ಕೆ ವ್ಯಾಪಕವಾಗಿ ಹರಡುವ ಸೂಚನೆಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಹಿತದೃಷ್ಠಿಯಿಂದ ಕೆ.ಆರ್.ಪೇಟೆ ಟೌನ್ ಸೇರಿದಂತೆ ತಾಲೂಕಿನಾದ್ಯಂತ ವಾರದಲ್ಲಿ ನಾಲ್ಕು ದಿನಗಳು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ…

ಕೊರೋನ ವಾರಿಯರ್ಸ್‍ಗೆ ಬಸವ ರತ್ನ ಪ್ರಶಸ್ತಿ ಪ್ರದಾನ.

ಮೈಸೂರು: ಸುವರ್ಣ ಬೆಳಕು ಫೌಂಡೇಷನ್ ಹಾಗೂ ಹಿಮಾಲಯ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಪ್ರಯುಕ್ತ ಕೊರೋನಾ ವಾರಿಯರ್ಸ್ ಗೆ ಬಸವ ರತ್ನ ಪ್ರಶಸ್ತಿಯನ್ನು ನಗರದಲ್ಲಿಂದು ಪ್ರದಾನ ಮಾಡಲಾಯಿತು. ನಗರದ ಗನ್ ಹೌಸ್ ಬಳಿಯ ಶ್ರೀ ಬಸವೇಶ್ವರ ಪ್ರತಿಮೆ ಮುಂಭಾಗ ನಡೆದ ಸರಳ…

ಮುಂದುವರೆದ ಮೂಕ ಪ್ರಾಣಿಗಳ ಹಸಿವು ನೀಗಿಸುವ ಕಾರ್ಯ

ಮೈಸೂರು: ಲಾಕ್ ಡೌನ್ ಹಿನ್ನಲೆಯಲ್ಲಿ ನಗರದಲ್ಲಿ ಆಹಾರವಿಲ್ಲದೆ ಹಸಿವಿನಿಂದ ಬಳಲುತ್ತಿರುವ ಮೂಕ ಪ್ರಾಣಿಗಳನ್ನು ಹುಡುಕಿ ಆಹಾರ ನೀಡುವ ಕಾರ್ಯವನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಕಳೆದ ಹದಿಮೂರು ದಿನಗಳಿಂದ ಮಾಡುತ್ತಾ ಬಂದಿದೆ. ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷರಾದ ಹೇಮಂತ್…

ಮೈಸೂರಿನ ರಂಗಭೂಮಿ ಕಲಾವಿದರಿಗೆ ದಿನಸಿ ಕಿಟ್ ವಿತರಣೆ

ಮೈಸೂರು: ಲಾಕ್ ಡೌನ್ ನಿಂದ ಸಂಕಷ್ಟದಲ್ಲಿ ಸಿಲುಕಿರುವ ರಂಗಭೂಮಿ ಕಲಾವಿದರಿಗೆ ಮತ್ತು ಆರ್ಕೆಸ್ಟ್ರಾ ಕಲಾವಿದರಿಗೆ ದಿನನಿತ್ಯ ಬಳಕೆಯ ದಿನಸಿ ಕಿಟ್ ಗಳನ್ನು ಬಿಜೆಪಿ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ವಿತರಿಸಲಾಯಿತು . ಈ ವೇಳೆ ಮಾತನಾಡಿದ ಬಿಜೆಪಿ ನರಸಿಂಹರಾಜ…

ನಾಗರಹೊಳೆಯಲ್ಲಿ ಹೆಣ್ಣು ಕರಡಿ ಸಾವು

ಮೈಸೂರು: ಹೆಣ್ಣು ಕರಡಿಯೊಂದರ ಮೃತದೇಹ ನಾಗರಹೊಳೆ ರಾಷ್ಟ್ರೀಯ ಉದ್ಯನವನದಲ್ಲಿ ಪತ್ತೆಯಾಗಿದ್ದು, ಸ್ವಾಭಾವಿಕವಾಗಿ ಸಾವನ್ನಪ್ಪಿರುವುದಾಗಿ ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ವೀರನಹೋಸಳ್ಳಿ ವನ್ಯಜೀವಿ ವಲಯದ ಚಾಮಳ್ಳಿ ಶಾಖೆಯ ಅರಣ್ಯಪ್ರದೇಶದಲ್ಲಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದ್ದು, ಇದು ಅಂದಾಜು ೫ ರಿಂದ…

ಚಾಮರಾಜನಗರ: ಖರೀದಿ ಭರದಲ್ಲಿ ಸಾಮಾಜಿಕ ಅಂತರ ಮಾಯ!

ಚಾಮರಾಜನಗರ : ಗುರುವಾರದಿಂದ ನಾಲ್ಕು ದಿನ ಚಾಮರಾಜನಗರ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ಇರುವ ಹಿನ್ನಲೆಯಲ್ಲಿ ಬುಧವಾರ ಬೆಳಗ್ಗೆಯಿಂದಲೇ ಜಿಲ್ಲೆಯ ಪ್ರಮುಖ ವ್ಯಾಪಾರ ಸ್ಥಳಗಳಲ್ಲಿ ಜನ ಸಂದಣಿ ಅಧಿಕವಾಗಿತ್ತು. ವಿವಿಧ ಕಡೆಗಳಿಂದ ಸಾರ್ವಜನಿಕರು ಪ್ರಮುಖ ವ್ಯಾಪಾರ ವಹಿವಾಟು ಸ್ಥಳಗಳಿಗೆ ಆಗಮಿಸಿ ನಾಲ್ಕು…

ತಜ್ಞವೈದ್ಯರು ಮತ್ತು ವೈದ್ಯರ ನೇರ ಸಂದರ್ಶನಕ್ಕೆ ಅರ್ಜಿ 

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೋವಿಡ್- 19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಹಾಗೂ ಕೋವಿಡ್ ಸೋಂಕಿತ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾಕೇರ್ ಆಸ್ಪತ್ರೆ ಮತ್ತು ಪಿ.ಕೆ.ಟಿ.ಬಿ, ಹಾಗೂ ಸಿ.ಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ…

ಕೊರೋನಾ ವಿಚಾರದಲ್ಲಿ ಕಾಂಗ್ರೆಸ್‌ನಿಂದ ಕೆಟ್ಟ ರಾಜಕಾರಣ

ಕೆ.ಆರ್.ನಗರ: ದೇಶದಾದ್ಯಂತ ಕೊರೋನಾ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದರೂ ಇದಕ್ಕೆ ಸಹಕಾರ ನೀಡದ ಕಾಂಗ್ರೆಸ್ ಪಕ್ಷದ ಮುಖಂಡರು ಕೆಟ್ಟ ರಾಜಕಾರಣ ಮಾಡಿ ಜನರಲ್ಲಿ ಭಯದ ವಾತಾವರಣವನ್ನುಂಟು ಮಾಡುತ್ತಿದ್ದಾರೆ ಎಂದು…

ಮಂಡ್ಯದ ವಳಗೆರೆಮೆಣಸ ಗ್ರಾಮ ಸೀಲ್ ಡೌನ್

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ವಳಗೆರೆಮೆಣಸ ಗ್ರಾಮದಲ್ಲಿ ಸುಮಾರು 29 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಎಂ.ಶಿವಮೂರ್ತಿ ನೇತೃತ್ವದಲ್ಲಿ ಗ್ರಾಮವನ್ನು ಸಂಪೂರ್ಣ ಸೀಲ್‌ಡೌನ್ ಮಾಡಿ, ಕಂಟೋನ್ ಮೆಂಟ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಇನ್ಮುಂದೆ ಈ ಗ್ರಾಮದಿಂದ ಜನರು…

ರಾಜ್ಯ ಸರ್ಕಾರದಿಂದ ಕೊರೋನಾ ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಕೆಳ ವರ್ಗದ ವಿವಿಧ ವಲಯಗಳ ಕಾರ್ಮಿಕರು. ರೈತರು, ನಿರ್ಗತಿಕರು, ದಿನಗೂಲಿ ನೌಕರರು ಸೇರಿದಂತೆ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಬಹಳಷ್ಟು ಮಂದಿ ಸರ್ಕಾರ ತಮಗೇನಾದರೂ ಪ್ಯಾಕೇಜ್ ಘೋಷಣೆ ಮಾಡುತ್ತದೆಯಾ ಎಂದು ಕಾಯುತ್ತಲೇ ಬಂದಿದ್ದರು. ಇದೀಗ ಸರ್ಕಾರ…