ದಿನಾಂಕ ೨೦.೦೨.೨೦೨೨ ರಂದು ಮೈಸೂರು ನಗರದ ಸಿಸಿಬಿ ಘಟಕದ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಹಳೆಯ ಮೂವರು ಎಂ.ಒ ಆರೋಪಿಗಳು ಮೈಸೂರು ನಗರದ ಲಷ್ಕರ್ ಮೊಹಲ್ಲಾದ, ಅಶೋಕ ರಸ್ತೆಯಲ್ಲಿರುವ ಇಂಗುಲಾಂಬಿಕೆ ವೈನ್ಸ್ ಸ್ಟೋರ್‍ಸ್ ಮುಂಭಾಗ ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಲಾಗಿ, ಆರೋಪಿಗಳು ಮೈಸೂರು ನಗರ ಮತ್ತು ಮಂಡ್ಯ ಜಿಲ್ಲಾ ವ್ಯಾಪ್ತಿಗಳಲ್ಲಿ ಸರಗಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು ೦೪ ಸರಗಳ್ಳತನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ೧೬೫ ಗ್ರಾಂ ತೂಕದ ೦೫ ಚಿನ್ನದ ಸರಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಒಂದು ದ್ವಿ ಚಕ್ರ ವಾಹನವನ್ನು. ವಶಪಡಿಸಿಕೊಂಡಿದ್ದಾರೆ.
ಈ ಪತ್ತೆ ಕಾರ್ಯದಿಂದ ಮೈಸೂರುನಗರದ ನರಸಿಂಹರಾಜ ಠಾಣೆಯ-೧, ಕುವೆಂಪುನಗರ -೧, ಲಕ್ಷ್ಮಿಪುರಂ ೧, ಶ್ರೀರಂಗಪಟ್ಟಣ ಪೊಲೀಸ್ ಠಾಣೆಯ ೧ ಸರಗಳ್ಳತನ ಪ್ರಕರಣ ಸೇರಿದಂತೆ ಒಟ್ಟು ೦೪ ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ರವರಾದ ಶ್ರೀಮತಿ ಗೀತಪ್ರಸನ್ನ, ಐ.ಪಿ.ಎಸ್. ಹಾಗೂ ಸಿಸಿಬಿ ಘಟಕದ ಎಸಿಪಿ ರವರಾದ ಶ್ರೀ. ಸಿ.ಕೆ ಅಶ್ವಥನಾರಾಯಣ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ನಡೆಸಿದ್ದು ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ:ಚಂದ್ರಗುಪ್ತ ಐ.ಪಿ.ಎಸ್ ರವರು ಪ್ರಶಂಶಿಸಿರುತ್ತಾರೆ.