ಚಾಮರಾಜನಗರ: ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಗೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಸುವ್ಯವಸ್ಥೆಯಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಆಗಿದ್ದ ವಿ.ಚೇತನ್ ರವರನ್ನು ವರ್ಗಾವಣೆ ಮಾಡಿ, ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ತಾಜುದ್ದೀನ್ ರವರನ್ನು ಸಂತೇಮರಹಳ್ಳಿ ಪೊಲೀಸ್ ಠಾಣೆಗೆ, ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ವೆಂಕಟೇಶ್ ರವರನ್ನು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ದೀಕ್ಷಿತ್ ಕುಮಾರ್ ರವರನ್ನು ಚಾಮರಾಜನಗರದ ಎಫ್.ಎಂ.ಎಸ್ ( ಅರಣ್ಯ ಸಂಚಾರಿ ಪೊಲೀಸ್ ದಳ)ಕ್ಕೆ, ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಎಸ್.ರಾಧಾ ರವರನ್ನು ಮೈಸೂರು ಜಿಲ್ಲೆಯ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ. ದೇವಿರವರನ್ನು ರಾಜ್ಯ ಗುಪ್ತ ವಾರ್ತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಮಹಾ ನಿರೀಕ್ಷಕ ದಕ್ಷಿಣ ವಲಯ ಅವರು ಆದೇಶಿಸಿದ್ದಾರೆ.

ಸಂಪೂರ್ಣ ಮಾಹಿತಿ ಇಲ್ಲಿದೆ

By admin