ಗುಂಡ್ಲುಪೇಟೆ: ತಾಲೂಕಿನ ಹಂಗಳ ಪಬ್ಲಿಕ್ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ವತಿಯಿಂದ ನೋಕಿಯಾ ಮೊಬೈಲ್ ಪೋನ್‍ಗಳನ್ನು ಗ್ರಾಪಂ ಸದಸ್ಯ ವೃಷಬೇಂದ್ರ ಸಮ್ಮುಖದಲ್ಲಿ ವಿತರಣೆ ಮಾಡಲಾಯಿತು.

ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ನೋಕಿಯಾ ಕಂಪನಿಯ ಸಹಯೋಗದೊಂದಿಗೆ ಕೈಲಾಸ್ ಸತ್ಯಾರ್ಥಿ ಚಿಲ್ಡ್ರನ್ ಫೌಂಡೇಶನ್ ಉಚಿತವಾಗಿ ನೀಡಿದೆ. ಈ ಫೆÇೀನ್‍ಗಳ ಮುಖಾಂತರ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಬೈಜೂಸ್ ಆಪನ್ನು ಇನ್ಸ್ಟಾಲ್ ಮಾಡಿ ವಿತರಿಸಲಾಗಿದ್ದು, ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಕಲಿಕೆಯಲ್ಲಿ ಮುಂದುವರೆಯಲು ಅನುಕೂಲ ಮಾಡಿಕೊಡಲಾಗಿದೆ.

ಈ ವೇಳೆ ಕೈಲಾಸ ಸತ್ಯಾರ್ಥಿ ಫೌಂಡೇಷನ್‍ನ ಜಿ.ಸಿ.ನಾರಾಯಣಸ್ವಾಮಿ ಮಾತನಾಡಿ, ಕೊರೊನಾದಿಂದ ಶಾಲಾ-ಕಾಲೇಜುಗಳು ಮುಚ್ಚಿದ ಪರಿಣಾಮ ಮಕ್ಕಳ ಕಲಿಕೆಗೆ ಪೂರಕವಾಗಿ ಸರ್ಕಾರ ಆನ್‍ಲೈನ್‍ನಲ್ಲಿ ತರಗತಿ ಆರಂಭಿಸಿದೆ. ಆದರೆ ಕೆಲವು ವಿದ್ಯಾರ್ಥಿಗಳ ಪೋಷಕರ ಹತ್ತಿರ ಮೊಬೈಲ್ ಇಲ್ಲದ್ದನ್ನು ಮನಗಂಡು ಅಂತವರನ್ನು ಗುರುತಿಸಿ ಮೊಬೈಲ್ ಪೋನ್ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪವಿತ್ರ, ಸಿದ್ದರಾಜು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ: ಬಸವರಾಜು ಎಸ್. ಹಂಗಳ

By admin