ಚಾಮರಾಜನಗರ: ಚಾಮರಾಜನಗರ ನಗರಸಭಾ ವ್ಯಾಪ್ತಿಯ ೮ನೇ ವಾರ್ಡ್ ಹಾಗೂ ೧೫ ನೇ ವಾರ್ಡ್‌ನ ಆದಿಜಾಂಭವರ ಬಡಾವಣೆ ಹಾಗೂ ಪೌರಕಾರ್ಮಿಕರ ಬಡಾವಣೆಗಳಿಗೆ ಭೇಟಿ ನೀಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಮಳೆ ಹಾನಿ ಬಗ್ಗೆ ಪರಿಶೀಲಿಸಿದರು.
ಭಾರಿ ಮಳೆಯಿಂದ ನಗರದ ೧೫ನೇ ವಾರ್ಡಿನಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ತೊಂದರಟ ಉಂಟಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದರು. ನಂತರ ೮ನೆ ವಾರ್ಡಿನಲ್ಲಿ ಮಳೆಯಿಂದ ಗೋಡೆ ಕುಸಿದ ಮನೆಗಳಿಗೆ ಭೇಟಿ ನೀಡಿ ಮನೆ ಕಳೆದುಕೊಂಡವರ ಪಟ್ಟಿಯನ್ನು ತಯಾರಿಸಿ ಅಗತ್ಯ ಪರಿಹಾರ ನೀಡಿ ತ್ವರಿತವಾಗಿ ಕ್ರಮಕೈಗೊಳ್ಳುವಂತೆ ಸ್ಥಳದಲ್ಲಿದ್ದ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ನಗರದಲ್ಲಿ ನಿರಂತರ ಮಳೆಯಿಂದಾಗಿ ಹಾನಿ ಉಂಟಾಗಿದ್ದು ಸಂತ್ರಸ್ಥರಿಗೆ ಸೂಕ್ತ ಪರಿಹಾರ ಕಲ್ಪಿಸಲು ಕ್ರಮವಹಿಸಲಾಗಿದ್ದು ಮನೆ ಕಳೆದುಕೊಂಡವರಿಗೆ ಹೊಸದಾಗಿ ಮನೆ ನಿರ್ಮಿಸಲು ಮುಂದಾಗುವುದಾಗಿ ಎಂದು ಶಾಸಕರು ತಿಳಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾ.ಗು.ನಾಗರಾಜು ಅವರು ಆದಿಜಾಂಭವರ ಬಡಾವಣೆಯ ಮುಖ್ಯರಸ್ತೆಯಿಂದ ಹಾಸ್ಟೆಲ್ ವರೆಗೆ ಸಿಸಿ ರಸ್ತೆ ನಿರ್ಮಿಸಿ ಚರಂಡಿ ನಿರ್ಮಾಣ ಮಾಡಿದರೆ ಮಳೆಯ ನೀರು ಸರಾಗವಾಗಿ ಹರಿದು ಚರಂಡಿ ಮೂಲಕ ಹರಿಯುತ್ತದೆ ಇದರಿಂದ ಮಳೆ ನೀರು ಮನೆಗಳಿಗೆ ನುಗ್ಗುವುದು ತಪ್ಪುತ್ತದೆ ಎಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಬಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ,ಮುಖಂಡ ಎಚ್.ಎಚ್.ನಾಗರಾಜು, ನಗರಸಭೆ ಇಂಜಿನಿಯರ್ ರೇಣುಕಾ ಆರಾಧ್ಯ,ಆರೋಗ್ಯ ನಿರೀಕ್ಷಕ ಮಂಜುನಾಥ್, ಸ್ವಾಮಿ ಸೇರಿದಂತೆ ಬಡಾವಣೆಯ ಮುಖಂಡರು ಹಾಜರಿದ್ದರು.