ಡಿ.22 ರಂದು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ
ಮೈಸೂರು, ಡಿಸೆಂಬರ್:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 2021ರ ಡಿಸೆಂಬರ್ 22ರಂದು ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ.ಪ್ರಕಾಶ್, ಐ.ಎ.ಎಸ್ ಅಧಿಕಾರಿಗಳಾದ ಡಾ.ಎಂ.ಆರ್.ರವಿ ಅವರು ಭಾಗವಹಿಸಲಿದ್ದು, ಕರಾಮುವಿ ಕುಲಪತಿಗಳಾದ ಪ್ರೊ.ಎಸ್.ವಿದ್ಯಾಶಂಕರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವರಾದ ಪ್ರೊ.ಆರ್.ರಾಜಣ್ಣ ಅವರು ಉಪಸ್ಥಿತಿಯಲ್ಲಿರುವರು ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.