
ಮೈಸೂರು -೧೧ ಚಾಮರಾಜ ವಿಧಾನಸಭಾ ಕ್ಷೇತ್ರ, ಮೈಸೂರು ರವರು ಇಂದು ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿರವರಿಗೆ ಹಾಗೂ ಡಾ: ಸುಧಾಕರ್, ಸನ್ಮಾನ್ಯ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರು ರವರುಗಳಿಗೆ ಮೈಸೂರು ನಗರದ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೈಸೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆಗೆ ಸೇರಿದ ಆಸ್ಪತ್ರೆ ಕಟ್ಟಡಗಳ ದುರಸ್ತಿ ಹಾಗೂ ನವೀಕರಣ ಕಾಮಗಾರಿಗೆ ತಯಾರಿಸಲಾದ ಅಂದಾಜು ವೆಚ್ಚದ ಮೊತ್ತ ರೂ: ೮೫.೯೮ ಕೋಟಿ, ಲ್ಯಾನ್ಸ್ ಡೌನ್ ಕಟ್ಟಡವನ್ನು ಹೊಸದಾಗಿ ಪಾರಂಪರಿಕ ಶೈಲಿಯಲ್ಲಿ ಮರು ನಿರ್ಮಾಣ ಮಾಡಲು ಒಟ್ಟು ಅಂದಾಜು ವೆಚ್ಚ ರೂ: ೩೭.೦೦ ಕೋಟಿ ಹಾಗೂ ದೇವರಾಜ ಮಾರುಕಟ್ಟೆ ಮರು ನಿರ್ಮಾಣ ಕಾಮಗಾರಿಯ ಅಂದಾಜು ವೆಚ್ಚ ರೂ: ೯೮.೦೦ ಕೋಟಿ ಪ್ರಸ್ತಾವನೆಗಳನ್ನು ಈಗಾಗಲೇ ಹಲವಾರು ಬಾರಿ ಸಲ್ಲಿಸಿದ್ದರೂ ಈವರೆವಿಗಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲವೆಂದು, ಇದರಿಂದಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿರುವುದರಿಂದ, ಈಗಾಗಲೇ ಮಾನ್ಯ ಮುಖ್ಯ ಮಂತ್ರಿಗಳು ಭರವಸೆ ನೀಡಿರುವಂತೆ ಈ ಮಾಹೆಯಲ್ಲಿ ಮಂಡನೆಯಾಗಲಿರುವ ೨೦೨೨-೨೩ ನೇ ಸಾಲಿನ ಆಯವ್ಯಯದಲ್ಲಿ ಸೇರ್ಪಡೆಗೊಳಿಸಿ ಅನುದಾನ ನಿಗಧಿಪಡಿಸಬೇಕೆಂದು ಕೋರಿ ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಪ್ರಸ್ತಾವನೆ ಸಲ್ಲಿಸಿ ಬೇಡಿಕೆ ಮಂಡಿಸಿದರು.