ಮೈಸೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ತೀರಾ ಸಂಕಷ್ಟಕ್ಕೆ ಸಿಲುಕಿದ ಮೈಸೂರಿನಲ್ಲಿರುವ ಬಡ ಮತ್ತು ನಿರಾಶ್ರಿತ ಕುಟುಂಬಗಳಿಗೆ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್ ಕುಮಾರ್ ದಿನಸಿ ಕಿಟ್ ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆಲವು ಕುಟುಂಬಗಳು ಸಂಕಷ್ಟಕ್ಕೀಡಾಗಿದ್ದು ಕೆಲಸವಿಲ್ಲದೆ, ಒಪ್ಪೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಮಯದಲ್ಲಿ ಸಹಾಯ ಮಾಡುವುದು ನಮ್ಮೆಲ್ಲರ ಕರ್ತವ್ಯ ವಾಗಿದ್ದು, ಮಾನವೀಯತೆ ದೃಷ್ಟಿಯಿಂದ ಒಬ್ಬರಿಗೊಬ್ಬರು ಸಹಾಯ ಮಾಡಿ ಒಟ್ಟಾಗಿ ನಿಲ್ಲಬೇಕಾಗಿದೆ. ಹೆಚ್ಚು ತೊಂದರೆಯಲ್ಲಿರುವ ಜನರಿಗೆ ನಾವು ಸಹಾಯ ಹಸ್ತ ಚಾಚಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ರಾಜೀವ್ ಗಾಂಧಿಯವರ ಸಿದ್ಧಾಂತವನ್ನು ಬಲವಾಗಿ ನಂಬಿದ್ದೇವೆ ಮತ್ತು ಅದನ್ನು ಪಾಲಿಸುತ್ತಾ ಬಂದಿದ್ದು, ಆ ನಿಟ್ಟಿನಲ್ಲಿ ಮೈಸೂರು ನಗರದಲ್ಲಿರುವ ಬಡಕುಟುಂಬದವರು, ನಿರಾಶ್ರಿತರಿಗೆ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಹೇಳಿದರು.
ಈ ಸಂದರ್ಭ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ರಾದ ಗಿರೀಶ್, ಯುವ ಕಾಂಗ್ರೆಸ್ ಅಧ್ಯಕ್ಷ ಎಂ ಹ್ಯಾರಿಸ್, ನಗರ ಕಾಂಗ್ರೆಸ್ ಕಾರ್ಯದರ್ಶಿ ಶಿವಲಿಂಗಯ್ಯ, ಫೈಲ್ವಾನ್ ಸುನೀಲ್, ರಾಜೇಶ್, ಪವನ್ ಸಿದ್ದರಾಮು ಮತ್ತಿತರರಿದ್ದರು.